ಬೆಂಗಳೂರು: ಅರ್ಹ ವಿದ್ಯಾರ್ಥಿನಿಗೆ ಎಂಬಿಬಿಎಸ್ ಕೋರ್ಸ್ ಗೆ ಪ್ರವೇಶ ನಿರಾಕರಿಸಿದ್ದ ತುಮಕೂರು ಸಿದ್ಧಾರ್ಥ ವೈದ್ಯಕೀಯ ಕಾಲೇಜಿಗೆ ಹೈಕೋರ್ಟ್ ದಂಡ ವಿಧಿಸಿರುವ ಘಟನೆ ನಡೆದಿದೆ.
2017-18ನೇ ಸಾಲಿನಲ್ಲಿ ಎಂಬಿಬಿಎಸ್ ಕೋರ್ಸ್ ಗೆ ಅರ್ಹ ವಿದ್ಯಾರ್ಥಿನಿಯೊಬ್ಬರಿಗೆ ಸಿದ್ಧಾರ್ಥ ವೈದ್ಯಕೀಯ ಕಾಲೇಜು ಪ್ರವೇಶ ನಿರಾಕರಿಸಿತ್ತು. ಈ ಕುರಿತು ಸಂತ್ರಸ್ತ ವಿದ್ಯಾರ್ಥಿನಿ ಸಂಜನಾ ಸಲ್ಲಿಸಿದ್ದ ರಿಟ್ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ವಿಭಾಗೀಯ ಪೀಠ, ಸಿದ್ಧಾರ್ಥ ವೈದ್ಯಕೀಯ ಕಾಲೇಜಿಗೆ 15 ಲಕ್ಷ ದಂಡ ವಿಧಿಸಿದೆ.
ದಂಡದ ಮೊತ್ತವನ್ನು ಸಂತ್ರಸ್ತ ಅರ್ಜಿದಾರರಿಗೆ ಪರಿಹಾರ ರೂಪದಲ್ಲಿ ಪಾವತಿಸಿ ಎಂದು ಸ್ವೈದ್ಯಕೀಯ ಕಾಲೇಜಿಗೆ ಹೈಕೋರ್ಟ್ ಆದೇಶ ಹೊರಡಿಸಿದೆ.