ಉಡುಪಿ: ಪೊಲೀಸ್ ಮ್ಯಾರಥಾನ್ ವೇಳೆ ಏಕಾಏಕಿ ಕುಸಿದು ಬಿದ್ದು ಎಸ್ ಐ ಓರ್ವರು ಸಾವನ್ನಪ್ಪಿರುವ ದಾರುಣ ಘಟನೆ ಉಡುಪಿಯಲ್ಲಿ ನಡೆದಿದೆ.
ನಾಸಿರ್ ಹುಸೇನ್ ಮೃತ ಎಸ್ ಐ. ಕುಂದಾಪುರ ಗ್ರಾಮಾಂತರ ಠಾಣೆಯಲ್ಲಿ ಠಾಣಾಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದರು. ಹೃದಯಾಘಾತದಿಂದ ಸಾವನ್ನಪ್ಪಿರುವ ಶಂಕೆ ವ್ಯಕ್ತವಾಗಿದೆ.
ಇಂದು ಪೊಲೀಸ್ ಇಲಕಹೆಯಿಂದ ಮ್ಯಾರಥಾನ್ ಆಯೋಜಿಸಲಾಗಿತ್ತು. ಜಿಲ್ಲಾ ಪೊಲೀಸ್ ನಮ್ಮ ಪೊಲೀಸ್ ನಮ್ಮ ಹೆಮ್ಮೆ ಘೋಷ ವಾಖ್ಯದಡಿ ಮ್ಯಾರಥಾನ್ ನಡೆಸುತ್ತಿತ್ತು. ಡ್ರಗ್ಸ್ ಮುಕ್ತ ಕರ್ನಾಟಕ ಧ್ಯೇಯದೊಂದಿಗೆ ಓಟ ಆರಂಭವಾದಾಗ ನಗರದ ತಾಲೂಕು ಪಂಚಾಯತ್ ಮುಂಭಾಗದ ರಸ್ತೆಯಲ್ಲಿ ಎಸ್ ಐ ಏಕಾಏಕಿ ಕುಸಿದು ಬಿದ್ದಿದ್ದಾರೆ.
ತಕ್ಷಣ ಅವರನ್ನು ಆಸ್ಪತ್ರೆಗೆ ದಾಖಲಿಸಲಾಯಿತು. ಆದರೆ ಪ್ರಯೋಜನವಾಗಿಲ್ಲ. ಅಷ್ಟರಲ್ಲೇ ಅವರು ಕೊನೆಯುಸಿರೆಳೆದಿದ್ದರು.

