HomeLatest Newsವಾಟ್ಸಾಪ್ ನಲ್ಲಿ 'ಸಿದ್ರಾಮುಲ್ಲಾ ಖಾನ್' ಸ್ಟೇಟಸ್ ಹಾಕಿ ಸಿಎಂ ಅವಹೇಳನ: ಪಿಡಿಒ ವಿರುದ್ಧ ಎಫ್ಐಆರ್, ಅಮಾನತು

ವಾಟ್ಸಾಪ್ ನಲ್ಲಿ ‘ಸಿದ್ರಾಮುಲ್ಲಾ ಖಾನ್’ ಸ್ಟೇಟಸ್ ಹಾಕಿ ಸಿಎಂ ಅವಹೇಳನ: ಪಿಡಿಒ ವಿರುದ್ಧ ಎಫ್ಐಆರ್, ಅಮಾನತು

ಕಲಬುರಗಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಅವಹೇಳನ ಮಾಡುವ ರೀತಿಯಲ್ಲಿ ವಾಟ್ಸಾಪ್ ನಲ್ಲಿ ಸ್ಟೇಟಸ್ ಹಾಕಿಕೊಂಡಿದ್ದ ಆಳಂದ ತಾಲೂಕಿನ ಸೊಂಟನೂರ ಗ್ರಾಮ ಪಂಚಾಯಿತಿ ಪಿಡಿಒ ಪ್ರವೀಣ್ ಕುಮಾರ್ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ.

ಆಗಸ್ಟ್ 21ರಂದು ತಮ್ಮ ಮೊಬೈಲ್ ನ ವಾಟ್ಸಾಪ್ ನಲ್ಲಿ ಸಿದ್ರಾಮುಲ್ಲಾ ಖಾನ್ ಎಂಬ ಬರಹದ ಜೊತೆಗೆ ಸಿದ್ದರಾಮಯ್ಯ ಅವರ ತಲೆಗೆ ಮುಸ್ಲಿಮರು ಧರಿಸುವ ಟೋಪಿ ಹಾಕಿರುವಂತೆ ಎಡಿಟ್ ಮಾಡಲಾದ ಫೋಟೋವನ್ನು ಸ್ಟೇಟಸ್ ಹಾಕಿಕೊಂಡಿದ್ದರು.

ಗ್ರಾಮದ ಮುಖಂಡ ಮಹಾಲಿಂಗಪ್ಪ ಹರವಾಳ, ಆಳಂದ ತಾಲೂಕು ಕುರುಬರ ಸಂಘದ ಯುವ ಘಟಕದ ಅಧ್ಯಕ್ಷ ಬೀರಣ್ಣ ಪೂಜಾರಿ ಅವರು ಶಿಸ್ತು ಕ್ರಮಕ್ಕೆ ಒತ್ತಾಯಿಸಿ ಪಂಚಾಯಿತಿ ಮೇಲಾಧಿಕಾರಿಗಳಿಗೆ ದೂರು ನೀಡಿದ್ದರು. ಅಲ್ಲದೇ, ಗ್ರಾಮದ ಮುಖಂಡ ಮಲ್ಲಿಕಾರ್ಜುನ ಡನ್ನೂರ ಪೊಲೀಸರಿಗೆ ದೂರು ನೀಡಿದ್ದು, ಅವರ ದೂರು ಆಧರಿಸಿ ನಿಂಬರ್ಗಾ ಠಾಣೆ ಪೋಲೀಸರು ಎಫ್ಐಆರ್ ದಾಖಲಿಸಿದ್ದಾರೆ. ಘಟನೆಯ ಬಗ್ಗೆ ಮಾಹಿತಿ ಪಡೆದ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಭವರ್ ಸಿಂಗ್ ಮೀನಾ ಅವರು ಪಿಡಿಒ ಪ್ರವೀಣ್ ಕುಮಾರ್ ಅವರನ್ನು ಅಮಾನತುಗೊಳಿಸಿ ಆದೇಶ ಹೊರಡಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular