HomeKarnatakaBIG NEWS: ಮುಂದಿನ ಡಿಸೆಂಬರ್ ವೇಳೆಗೆ 'ಸಿಗಂದೂರು' ಸೇತುವೆ ಪೂರ್ಣ

BIG NEWS: ಮುಂದಿನ ಡಿಸೆಂಬರ್ ವೇಳೆಗೆ ‘ಸಿಗಂದೂರು’ ಸೇತುವೆ ಪೂರ್ಣ

Shigandur Bridge,ಸಿಗಂದೂರು ಸೇತುವೆ ಕಾಮಗಾರಿಗೆ ಜಲ ಅಡ್ಡಿ, 2 ವರ್ಷವಾದರೂ ತೆವಳುತ್ತಿರುವ ಕಾಮಗಾರಿ! - water disruption to shigandur bridge construction says national highway development authority - Vijay ...

ಈ ವರ್ಷಾಂತ್ಯಕ್ಕೆ ಪೂರ್ಣಗೊಳ್ಳಬೇಕಿದ್ದ ಕಳಸವಳ್ಳಿ – ಸಿಗಂದೂರು ಸೇತುವೆ ಕಾಮಗಾರಿ ವಿವಿಧ ಕಾರಣಗಳಿಗೆ ವಿಳಂಬವಾಗಿದ್ದು, ಹೀಗಾಗಿ ಮುಂದಿನ ವರ್ಷದ ಡಿಸೆಂಬರ್ ವೇಳೆಗೆ ಸಾರ್ವಜನಿಕರ ಬಳಕೆಗೆ ಲೋಕಾರ್ಪಣೆಗೊಳ್ಳುವ ನಿರೀಕ್ಷೆ ಇದೆ.

ಭಾನುವಾರದಂದು ಶಿವಮೊಗ್ಗದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಸಂಸದ ಬಿ.ವೈ. ರಾಘವೇಂದ್ರ ಈ ಮಾಹಿತಿ ನೀಡಿದ್ದು, ಅತಿವೃಷ್ಟಿ ಹಾಗು ಅನಾವೃಷ್ಟಿ ಕಾರಣಕ್ಕೆ ಶರಾವತಿ ಹಿನ್ನೀರು ಪ್ರದೇಶದಲ್ಲಿ ನೀರಿನ ಪ್ರಮಾಣ ಹೆಚ್ಚು ಕಡಿಮೆಯಾದ ಹಿನ್ನೆಲೆಯಲ್ಲಿ ಸಾಮಗ್ರಿ ಸಾಗಿಸಲು ಸಾಧ್ಯವಾಗದ್ದರಿಂದ ಸೇತುವೆ ನಿರ್ಮಾಣ ಕಾಮಗಾರಿ ವಿಳಂಬವಾಗಿದೆ ಎಂದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಕೇಂದ್ರ ಸಚಿವ ನಿತಿನ್ ಗಡ್ಕರಿ ಜನವರಿ 2ನೇ ಅಥವಾ 3ನೇ ವಾರದಲ್ಲಿ ಶಿವಮೊಗ್ಗಕ್ಕೆ ಆಗಮಿಸಲಿದ್ದು, ಈ ಸಂದರ್ಭದಲ್ಲಿ ಸೇತುವೆ ಕಾಮಗಾರಿಗೆ ವೇಗ ನೀಡುವ ಕುರಿತಂತೆ ಚರ್ಚೆ ನಡೆಸಲಾಗುತ್ತದೆ. ಬಹುತೇಕ ಮುಂದಿನ ವರ್ಷದ ಡಿಸೆಂಬರ್ ವೇಳೆಗೆ ಸಿಗಂದೂರು ಸೇತುವೆ ಪೂರ್ಣಗೊಳ್ಳಲಿದೆ ಎಂದು ತಿಳಿಸಿದರು.

For Latest News Updates, Join Our Whatsapp Community🚩
RELATED ARTICLES

Most Popular