ಶಿವಮೊಗ್ಗ: ಸಿಗಂದೂರು ಸೇತುವೆ ಮೇಲಿಂದ ಜಿಗಿದು ವ್ಯಕ್ತಿಯೋರ್ವ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನಲ್ಲಿ ನಡೆದಿದೆ.
ಮೈಸೂರು ಮೂಲದ ಆಂಜನೇಯ ಎಂಬುವವರು ಸೇತುವೆ ಮೇಲೆ ನಿಂತು ಕೆಳಗೆ ಹಾರಲು ಯತ್ನಿಸಿದರು. ಇದನ್ನು ಗಮನಿಸಿದ ಇಂಜಿನಿಯರ್ ಓರ್ವರು ತಕ್ಷಣ ವ್ಯಕ್ತಿಯನ್ನು ರಕ್ಷಿಸಿದ್ದಾರೆ. ಬಳಿಕ ಪೊಲೀಸರುಗೆ ಕರೆ ಮಾಡಿದ್ದಾರೆ.
ಸ್ಥಳಕ್ಕಾಗಮಿಸಿ ಪೊಲೀಸರು ವಿಚಾರಣೆ ನಡೆಸಿದಾಗ ವ್ಯಕ್ತಿ ಅದಾಗಲೇ ಸ್ಲೀಪಿಂಗ್ ಮಾತ್ರೆಗಳನ್ನು ಸೇವಿಸಿರುವುದು ಕೂಡ ಬಯಲಾಗಿದೆ. ನಿದ್ರೆ ಮಾತ್ರೆಗಳನ್ನು ಸೇವಿಸಿ ಸಿಗಂದೂರು ಸೇತುವೆ ಮೇಲಿಂದ ಹಾರಿ ಆತ್ಮಹತ್ಯೆಗೆ ಯತ್ನಿಸಿದ್ದರು. ಮೈಸೂರು ಮೂಲದ ಆಂಜನೇಯ ಲೆಕ್ಕಪರಿಶೋಧಕರಾಗಿ ಕರ್ತವ್ಯ ನಿರ್ವಹಿಸುತ್ತಿದ್ದರು. ವೈಯಕ್ತಿಕ ಕಾರಣಕ್ಕೆ ಆತ್ಮಹತ್ಯೆಗೆ ನಿರ್ಧರಿಸಿದ್ದರು ಎಂದು ತಿಳಿದು ಬಂದಿದೆ.
ಸದ್ಯ ವ್ಯಕ್ತಿಯನ್ನು ರಕ್ಷಿಸಿ ಬ್ಯಾಕೋಡ್ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.

