HomeKarnatakaಅಕ್ರಮ ಬಡಾವಣೆಗಳ ನಿವೇಶನ ಸಕ್ರಮಕ್ಕೆ ಸರ್ಕಾರದ ಕ್ರಮ: ಬಿ ಖಾತೆ ನೀಡಲು ಸಚಿವರ ಭರವಸೆ

ಅಕ್ರಮ ಬಡಾವಣೆಗಳ ನಿವೇಶನ ಸಕ್ರಮಕ್ಕೆ ಸರ್ಕಾರದ ಕ್ರಮ: ಬಿ ಖಾತೆ ನೀಡಲು ಸಚಿವರ ಭರವಸೆ

ಬೆಳಗಾವಿ(ಸುವರ್ಣಸೌಧ): ರಾಜ್ಯದಲ್ಲಿನ ಅಕ್ರಮ ಬಡಾವಣೆಗಳ ನಿವೇಶನಗಳನ್ನು ಸಕ್ರಮ ಮಾಡಿಕೊಡುವ ನಿಟ್ಟಿನಲ್ಲಿ ಬಿ ಖಾತೆ ನೀಡಲು ಕ್ರಮ ಕೈಗೊಳ್ಳಲಾಗುವುದು ಎಂದು ಪೌರಾಡಳಿತ ಸಚಿವ ಕೆ. ರಹೀಂ ಖಾನ್ ಭರವಸೆ ನೀಡಿದ್ದಾರೆ.

ವಿಧಾನಸಭೆಯಲ್ಲಿ ಪ್ರಶ್ನೋತ್ತರ ಕಲಾಪದಲ್ಲಿ ಜೆಡಿಎಸ್ ಸದಸ್ಯ ಜಿ.ಡಿ. ಹರೀಶ್ ಗೌಡ ಅವರ ಪ್ರಶ್ನೆಗೆ ಉತ್ತರಿಸುವ ವೇಳೆ ಸಚಿವರು ಮಾಹಿತಿ ನೀಡಿ, ರಾಜ್ಯದಲ್ಲಿನ ಅಕ್ರಮ ಬಡಾವಣೆಗಳ ನಿವೇಶನ ಸಕ್ರಮಗೊಳಿಸುವ ನಿಟ್ಟಿನಲ್ಲಿ ಬಿಬಿಎಂಪಿ ಮಾದರಿ ಬಿ ಖಾತೆ ನೀಡುವ ನಿಟ್ಟಿನಲ್ಲಿ ಸಂಪುಟ ಉಪಸಮಿತಿಯಲ್ಲಿ ಚರ್ಚಿಸಿ ಒಂದೆರಡು ತಿಂಗಳಲ್ಲಿ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಅಕ್ರಮ ಬಡಾವಣೆಯ ನಿವೇಶನಗಳ ಸಕ್ರಮ ಮಾಡಿ ಕೊಡುವ ಸರ್ಕಾರದ ನಿರ್ಧಾರಕ್ಕೆ ಸುಪ್ರೀಂ ಕೋರ್ಟ್ ನಲ್ಲಿ ತಡೆಯಾಜ್ಞೆಯಾಗಿದೆ. 10 -15 ವರ್ಷಗಳಿಂದ ಇರುವ ಈ ಸಮಸ್ಯೆ ಪರಿಹಾರಕ್ಕೆ ಕ್ರಮ ಕೈಗೊಳ್ಳಲಾಗಿದ್ದು, ಸಂಪುಟ ಉಪ ಸಮಿತಿ ರಚಿಸಲಾಗಿದೆ. ಮುಂದಿನ ಎರಡು ತಿಂಗಳಲ್ಲಿ ಇದಕ್ಕೆ ಪರಿಹಾರ ಕಲ್ಪಿಸಲಾಗುವುದು. ಬಿಬಿಎಂಪಿ ವ್ಯಾಪ್ತಿಯಲ್ಲಿ ಬಿ ಖಾತೆ ನೀಡುವಂತೆ ಇತರೆ ಕಡೆಗಳಲ್ಲಿಯೂ ಬಿ ಖಾತೆ ನೀಡಲು ಕ್ರಮ ಕೈಗೊಳ್ಳುವುದಾಗಿ ತಿಳಿಸಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular