HomeKarnatakaಕಂದಾಯ ಸಚಿವರಿಂದ ಸಿಹಿ ಸುದ್ದಿ: 1 ಲಕ್ಷ ಕುಟುಂಬಗಳಿಗೆ ಸೈಟ್ ಹಂಚಿಕೆ: ಪ್ರಧಾನಿ ಮೋದಿ ಚಾಲನೆ

ಕಂದಾಯ ಸಚಿವರಿಂದ ಸಿಹಿ ಸುದ್ದಿ: 1 ಲಕ್ಷ ಕುಟುಂಬಗಳಿಗೆ ಸೈಟ್ ಹಂಚಿಕೆ: ಪ್ರಧಾನಿ ಮೋದಿ ಚಾಲನೆ

ದೊಡ್ಡಬಳ್ಳಾಪುರ: ಜನವರಿ 19 ರಂದು ಯಾದಗಿರಿಗೆ ಪ್ರಧಾನಿ ಮೋದಿ ಆಗಮಿಸಲಿದ್ದಾರೆ ಎಂದು ಕಂದಾಯ ಸಚಿವ ಆರ್. ಅಶೋಕ ತಿಳಿಸಿದ್ದಾರೆ.

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರದಲ್ಲಿ ಮಾತನಾಡಿದ ಅವರು, ಅಲೆಮಾರಿ ಜನಾಂಗಕ್ಕೆ ನಿವೇಶನ ಕೊಡುವ ಯೋಜನೆ ಮಾಡಿದ್ದೇವೆ. ಕಂದಾಯ ಸಚಿವನಾಗಿ ಐತಿಹಾಸಿಕ ನಿರ್ಣಯ ಕೈಗೊಂಡಿದ್ದೇವೆ. ನೋಂದಣಿ ಮಾಡಿಸಿ ಕಂದಾಯ ಗ್ರಾಮವನ್ನಾಗಿ ಘೋಷಿಸುತ್ತೇವೆ. ಸಬ್ ರಿಜಿಸ್ಟ್ರಾರ್ ಕಚೇರಿಯಲ್ಲಿ ದಾಖಲೆ ನೋಂದಣಿ ಮಾಡಿಸುತ್ತೇವೆ ಎಂದು ಹೇಳಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಅಲೆಮಾರಿ ಸಮುದಾಯ ನೆಮ್ಮದಿಯಿಂದ ಬದುಕಲು ಐತಿಹಾಸಿಕ ನಿರ್ಧಾರ ಕೈಗೊಳ್ಳಲಾಗಿದೆ. ಇಡೀ ರಾಜ್ಯದಲ್ಲಿ ಒಂದು ಲಕ್ಷ ಕುಟುಂಬಗಳಿಗೆ ಅನುಕೂಲವಾಗಲಿದೆ. ಕುರುಬರ ಹಟ್ಟಿ, ಲಂಬಾಣಿ ತಾಂಡಾಗಳ ನಿವಾಸಿಗಳಿಗೆ ಅನುಕೂಲವಾಗುತ್ತದೆ. ಕಾರ್ಯಕ್ರಮ ಉದ್ಘಾಟನೆಗೆ ಪ್ರಧಾನಿ ನರೇಂದ್ರ ಮೋದಿ ಬರುತ್ತಾರೆ. ಒಂದು ಲಕ್ಷ ಕುಟುಂಬಗಳಿಗೆ ಸೈಟ್ ಕೊಡುವ ಮೂಲಕ ಗಿನ್ನಿಸ್ ದಾಖಲೆ ನಿರ್ಮಿಸಲಾಗುವುದು ಎಂದು ದೊಡ್ಡಬಳ್ಳಾಪುರದಲ್ಲಿ ಕಂದಾಯ ಸಚಿವ ಆರ್. ಅಶೋಕ್ ಹೇಳಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular