HomeKarnatakaರಾಜ್ಯ ರಾಜಕೀಯದಲ್ಲಿ ಮಹತ್ವದ ಬೆಳವಣಿಗೆ: ಕರ್ನಾಟಕ ಕಂಡ ಸುಧೀರ್ಘ ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ರಾಜೀನಾಮೆ

ರಾಜ್ಯ ರಾಜಕೀಯದಲ್ಲಿ ಮಹತ್ವದ ಬೆಳವಣಿಗೆ: ಕರ್ನಾಟಕ ಕಂಡ ಸುಧೀರ್ಘ ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ರಾಜೀನಾಮೆ

ಬೆಂಗಳೂರು: ಕಳೆದ ಆರು ತಿಂಗಳಿಂದ ರಾಜ್ಯ ಕಾಂಗ್ರೆಸ್ ನಲ್ಲಿ ಹಗ್ಗ ಜಗ್ಗಾಟಕ್ಕೆ ಕಾರಣವಾಗಿದ್ದ ನಾಯಕತ್ವ ಗೊಂದಲ ಇಂದು ಮಹತ್ವದ ಘಟ್ಟ ತಲುಪಲಿದೆ. ಕರ್ನಾಟಕ ಖಂಡ ಸುಧೀರ್ಘ ಅವಧಿಯ ಮುಖ್ಯಮಂತ್ರಿ ಸಿದ್ದರಾಮಯ್ಯ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಲಿದ್ದಾರೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಗುರುವಾರ ಬೆಳಿಗ್ಗೆ ತಮ್ಮ ಅಧಿಕೃತ ನಿವಾಸ ಕಾವೇರಿಯಲ್ಲಿ ಸಚಿವರಿಗೆ ಉಪಾಹಾರ ಕೂಟ ಆಯೋಜಿಸಿದ್ದು, ಮಧ್ಯಾಹ್ನದ ನಂತರ ರಾಹುಲ್ ಗಾಂಧಿಯವರ ಸೂಚನೆಯಂತೆ ರಾಜ್ಯಪಾಲರನ್ನು ಭೇಟಿಯಾಗಿ ರಾಜೀನಾಮೆ ಸಲ್ಲಿಸಲಿದ್ದಾರೆ. ನಂತರ ಪತ್ರಿಕಾಗೋಷ್ಠಿ ನಡೆಸಲಿದ್ದಾರೆ ಎನ್ನಲಾಗಿದೆ.

ಈ ನಡುವೆ ಸಿದ್ದರಾಮಯ್ಯ ಅವರನ್ನು ಸಿಎಂ ಸ್ಥಾನದಿಂದ ಕೆಳಗಿಳಿಸದಂತೆ ಬೆಂಬಲಿಗರಿಂದ ಭಾರಿ ಆಕ್ರೋಶ ವ್ಯಕ್ತವಾಗಿದ್ದು, ಪ್ರತಿಭಟನೆ ನಡೆಸಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

Most Popular