HomeKarnatakaBIG NEWS : ರಾಹುಲ್ ಗಾಂಧಿ ಅನರ್ಹತೆ ಖಂಡಿಸಿ ಕಾಂಗ್ರೆಸ್ ನಾಯಕರ ‘ಮೌನ ಪ್ರತಿಭಟನೆ'

BIG NEWS : ರಾಹುಲ್ ಗಾಂಧಿ ಅನರ್ಹತೆ ಖಂಡಿಸಿ ಕಾಂಗ್ರೆಸ್ ನಾಯಕರ ‘ಮೌನ ಪ್ರತಿಭಟನೆ’

ಬೆಂಗಳೂರು : ರಾಹುಲ್ ಗಾಂಧಿ ಅನರ್ಹತೆ ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿಯನ್ನು ಕೋರ್ಟ್ ವಜಾಗೊಳಿಸಿದ್ದು, ವಿಚಾರಕ್ಕೆ ಸಂಬಂಧಿಸಿದಂತೆ ಇಂದು ಕಾಂಗ್ರೆಸ್   ನಾಯಕರು ಮೌನ ಪ್ರತಿಭಟನೆ ನಡೆಸುತ್ತಿದ್ದಾರೆ.

BJP ಸೇಡಿನ ರಾಜಕಾರಣ ಮಾಡುತ್ತಿದೆ ಎಂದು ಆರೋಪಿಸಿ ಇಂದು ಬೆಂಗಳೂರಿನ ಫ್ರೀಡಂಪಾರ್ಕ್​​ನಲ್ಲಿ ಕಾಂಗ್ರೆಸ್ ಮೌನ​ ಪ್ರತಿಭಟನೆ ನಡೆಸುತ್ತಿದೆ. ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್ ,  ಸಚಿವರುಗಳಾದ ಪ್ರಿಯಾಂಕ ಖರ್ಗೆ, ಸತೀಶ್ ಜಾರಕಿಹೊಳಿ, ಶರಣ ಬಸಪ್ಪ, ಸಂತೋಷ್ ಲಾಡ್, ಶಾಸಕರಾದ ಪುಟ್ಟರಂಗಶೆಟ್ಟಿ, ಎ.ಆರ್.ಕೃಷ್ಣಮೂರ್ತಿ, ತುಕಾರಾಂ, ಮಹಂತೇಶ್, ಯುಬಿ ಬಣಕಾರ್, ಬಸವರಾಜ್ ದದ್ದಲ್, ಭೀಮ್ ಸೇನ್ ಸೇರಿದಂತೆ ಹಲವರು ಬಾಯಿಗೆ ಕಪ್ಪು ಪಟ್ಟಿ ಧರಿಸಿಕೊಂಡು ಪ್ರತಿಭಟನೆ ನಡೆಸುತ್ತಿದ್ದಾರೆ.

ಮೋದಿ ಉಪನಾಮ ಹೇಳಿಕೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮಾನನಷ್ಟ ಮೊಕದ್ದಮೆಯಲ್ಲಿ ಸಲ್ಲಿಸಿರುವ ಮರುಪರಿಶೀಲನಾ ಅರ್ಜಿಯನ್ನು ಗುಜರಾತ್ ಹೈಕೋರ್ಟ್ ವಜಾಗೊಳಿಸಿದೆ.ರಾಹುಲ್ ಗಾಂಧಿ ಮೇಲೆ ಕೇಸ್ ಹಾಕಿ ಸಂಸದ ಸ್ಥಾನ ವಜಾ ಮಾಡಲಾಗಿತ್ತು. ಇದನ್ನು ಪ್ರಶ್ನಿಸಿ ರಾಹುಲ್ ಗಾಂಧಿ ಸಲ್ಲಿಸಿದ್ದ ಮೇಲ್ಮನವಿ ಅರ್ಜಿಯನ್ನೂ ಗುಜರಾತ್ ಹೈಕೋರ್ಟ್ ವಜಾಗೊಳಿಸಿದೆ. 2019 ರಲ್ಲಿ ಲೋಕಸಭೆ ಚುನಾವಣೆಯ ಪ್ರಚಾರದ ವೇಳೆ ಕೋಲಾರದಲ್ಲಿ ರಾಹುಲ್ ಗಾಂಧಿ, ಮೋದಿ ಉಪನಾಮವನ್ನು ಬಳಸಿಕೊಂಡು ವಾಗ್ದಾಳಿ ನಡೆಸಿದ್ದರು. ಈ ಕುರಿತಂತೆ ಮಾನನಷ್ಟ ಪ್ರಕರಣ ದಾಖಲಾಗಿತ್ತು.ಈ ಪ್ರಕರಣದಲ್ಲಿ ಸೂರತ್ನ ಜಿಲ್ಲಾ ನ್ಯಾಯಾಲಯವು ರಾಹುಲ್ ಗಾಂಧಿಯನ್ನು 2023ರ ಮಾರ್ಚ್ನಲ್ಲಿ ದೋಷಿ ಎಂದು ತೀರ್ಪು ನೀಡಿತ್ತು, ರಾಹುಲ್ ಗಾಂಧಿಗೆ ಎರಡು ವರ್ಷಗಳ ಜೈಲು ಶಿಕ್ಷೆ ವಿಧಿಸಲಾಯಿತು. ನಂತರ ಮಾರ್ಚ್ 24ರಂದು ರಾಹುಲ್ ಗಾಂಧಿಯನ್ನು ಲೋಕಸಭೆಯಿಂದ ಅನರ್ಹಗೊಳಿಸಲಾಗಿತ್ತು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

 

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular