ಬಿಜೆಪಿ ಟಿಕೆಟ್ ಆಕಾಂಕ್ಷಿಗೆ ಬಿಗ್ ಶಾಕ್: ಕಾನೂನು ಸುವ್ಯವಸ್ಥೆಗೆ ಧಕ್ಕೆ ತರದಂತೆ ರೌಡಿ ಸೈಲೆಂಟ್ ಸುನೀಲನಿಗೆ ಪೊಲೀಸರ ಎಚ್ಚರಿಕೆ

ಬೆಂಗಳೂರು: ಚಾಮರಾಜಪೇಟೆ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸಲು ತಯಾರಿ ನಡೆಸಿದ್ದ ಮತ್ತು ಬಿಜೆಪಿ ಸದಸ್ಯತ್ವ ಪಡೆದುಕೊಂಡಿದ್ದ ರೌಡಿಶೀಟರ್ ಸೈಲೆಂಟ್ ಸುನಿನೀನಿಗೆ ಪೊಲೀಸರು ಖಡಕ್ ಎಚ್ಚರಿಕೆ ನೀಡಿದ್ದು, ಕಾನೂನು ಸುವ್ಯವಸ್ಥೆಗೆ ಧಕ್ಕೆ ತರದಂತೆ ವಾರ್ನಿಂಗ್ ಮಾಡಿದ್ದಾರೆ.

ಅಮೃತಹಳ್ಳಿ ಠಾಣೆ ಪೋಲೀಸರು ರೌಡಿಶೀಟರ್ ಸುನಿಲ್ ಕುಮಾರ್ ಅಲಿಯಾಸ್ ಸೈಲೆಂಟ್ ಸುನಿಲನಿಂದ ಮುಚ್ಚಳಿಕೆ ಬರೆಸಿಕೊಂಡು ಕಾನೂನು ವ್ಯವಸ್ಥೆಗೆ ಧಕ್ಕೆ ತರದಂತೆ, ಅಪರಾಧ ಚಟುವಟಿಕೆಗಳಲ್ಲಿ ಭಾಗಿಯಾಗದಂತೆ ಎಚ್ಚರಿಕೆ ನೀಡಿದ್ದಾರೆ.

ಈಶಾನ್ಯ ವಿಭಾಗದ ಡಿಸಿಪಿ ಲಕ್ಷ್ಮಿ ಪ್ರಸಾದ್ ಎಚ್ಚರಿಕೆ ನೀಡಿದ್ದು, 15 ಲಕ್ಷ ರೂಪಾಯಿ ಮೊತ್ತದ ಬಣ್ಣದಲ್ಲಿ ಮುಚ್ಚಳಿಕೆ ಬರೆಸಿಕೊಂಡು ಕಳುಹಿಸಿದ್ದಾರೆ. ಸೈಲೆಂಟ್ ಸುನೀಲ ಬಿಜೆಪಿಯಿಂದ ಸ್ಪರ್ಧಿಸಲು ಆಸಕ್ತಿ ತೋರಿ ಸದಸ್ಯತ್ವ ಕೂಡ ಪಡೆದುಕೊಂಡಿದ್ದು, ಬಿಜೆಪಿ ನಾಯಕರನ್ನು ಸೇರಿಸಿ ಕಾರ್ಯಕ್ರಮ ಮಾಡಿದ್ದ. ಇದನ್ನೇ ಅಸ್ತ್ರವಾಗಿಸಿಕೊಂಡ ಕಾಂಗ್ರೆಸ್ ನಾಯಕರು ಬಿಜೆಪಿ ರೌಡಿಶೀಟರ್ ಗಳನ್ನು ಸೇರಿಸಿಕೊಂಡು ರೌಡಿ ಮೋರ್ಚಾ ಆರಂಭಿಸಿದೆ ಎಂದು ಟೀಕಿಸಿದ್ದರು. ಮುಜುಗರಕ್ಕೀಡಾದ ಬಿಜೆಪಿ ಸೈಲೆಂಟ್ ಸುನಿಲ್ ಸದಸ್ಯತ್ವ ರದ್ದುಪಡಿಸಿತ್ತು.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read