HomeIndiaSIM Card Rules: ಸಿಮ್ ಕಾರ್ಡ್ ಬಳಸುವವರಿಗೆ ಬಿಗ್ ಅಲರ್ಟ್..! ಹೀಗೆ ಮಾಡಿದರೆ ₹50 ಲಕ್ಷದವರೆಗೆ...

SIM Card Rules: ಸಿಮ್ ಕಾರ್ಡ್ ಬಳಸುವವರಿಗೆ ಬಿಗ್ ಅಲರ್ಟ್..! ಹೀಗೆ ಮಾಡಿದರೆ ₹50 ಲಕ್ಷದವರೆಗೆ ದಂಡ!

ಸಿಮ್ ಕಾರ್ಡ್ ಬಳಕೆದಾರರಿಗೆ ಕೇಂದ್ರದ ದೂರಸಂಪರ್ಕ ಇಲಾಖೆಯಿಂದ ಮಹತ್ವದ ಎಚ್ಚರಿಕೆ ಹೊರಬಿದ್ದಿದೆ. ನಿಮ್ಮ ಹೆಸರಿನಲ್ಲಿ ನೋಂದಣಿಯಾಗಿರುವ ಸಿಮ್ ಕಾರ್ಡ್ ಅನ್ನು ಬೇರೆಯವರಿಗೆ ಬಳಸಲು ನೀಡಿದರೆ, ಅದರ ದುರ್ಬಳಕೆಯಿಂದ ಕಾನೂನು ತೊಡಕು ಎದುರಾಗುವ ಸಾಧ್ಯತೆ ಇದೆ. ಹೊಸ ಮಾರ್ಗಸೂಚಿಗಳ ಪ್ರಕಾರ, ಸಿಮ್ ಕಾರ್ಡ್ ಅನ್ನು ವಂಚನೆ ಅಥವಾ ಕಾನೂನುಬಾಹಿರ ಚಟುವಟಿಕೆಗಳಿಗೆ ಬಳಸಿದರೆ ₹50 ಲಕ್ಷದವರೆಗೆ ದಂಡ ಹಾಗೂ 3 ವರ್ಷಗಳವರೆಗೆ ಜೈಲು ಶಿಕ್ಷೆ ವಿಧಿಸುವ ಸಾಧ್ಯತೆ ಇದೆ ಎಂದು ವರದಿಯಾಗಿದೆ.

ದೇಶದಲ್ಲಿ ಹೆಚ್ಚುತ್ತಿರುವ ಸಿಮ್ ಕಾರ್ಡ್ ದುರ್ಬಳಕೆಯನ್ನು ತಡೆಯಲು ದೂರಸಂಪರ್ಕ ಇಲಾಖೆ ಕಠಿಣ ನಿಯಮಗಳನ್ನು ಜಾರಿಗೆ ತರುತ್ತಿದೆ. ವಿವಿಧ ಅಗತ್ಯಗಳಿಗಾಗಿ ಜನರು ಒಂದಕ್ಕಿಂತ ಹೆಚ್ಚು ಸಿಮ್ ಕಾರ್ಡ್‌ಗಳನ್ನು ಬಳಸುವುದು ಸಾಮಾನ್ಯವಾಗಿದೆ.

ಒಬ್ಬ ವ್ಯಕ್ತಿಯ ಬಳಿ ಎರಡು ಅಥವಾ ಮೂರು ಸಿಮ್ ಕಾರ್ಡ್‌ಗಳಿದ್ದರೆ ಯಾವುದೇ ಸಮಸ್ಯೆಯಿಲ್ಲ. ಆದರೆ ಅವುಗಳನ್ನು ಹೇಗೆ ಬಳಸಲಾಗುತ್ತಿದೆ ಎಂಬುದು ಇಲ್ಲಿ ಪ್ರಮುಖ ವಿಚಾರವಾಗಿದೆ. ಸಿಮ್ ಕಾರ್ಡ್‌ಗಳ ದುರ್ಬಳಕೆಯನ್ನು ತಡೆಯಲು ಇದೀಗ ಹೊಸ ನಿಯಮಗಳನ್ನು ಜಾರಿಗೆ ತರಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಕೆಲವೊಮ್ಮೆ ನಮ್ಮ ಹೆಸರಿನಲ್ಲಿ ಪಡೆದಿರುವ ಸಿಮ್ ಕಾರ್ಡ್ ಕಳೆದುಹೋಗಬಹುದು. ಅಥವಾ ನಾವೇ ನಮ್ಮ ಹೆಸರಿನಲ್ಲಿ ಸಿಮ್ ಕಾರ್ಡ್ ಪಡೆದು ಬೇರೆಯವರಿಗೆ ಬಳಸಲು ನೀಡಬಹುದು. ಆದರೆ ಹೀಗೆ ಮಾಡುವುದು ಮುಂದಿನ ದಿನಗಳಲ್ಲಿ ನಮಗೇ ತೊಂದರೆ ಉಂಟುಮಾಡುವ ಸಾಧ್ಯತೆ ಇದೆ. ನಮ್ಮ ಗುರುತಿನ ದಾಖಲೆಗಳ ಆಧಾರದ ಮೇಲೆ ಪಡೆದಿರುವ ಸಿಮ್ ಕಾರ್ಡ್ ಬಳಸಿ ಬೇರೆ ವ್ಯಕ್ತಿಗಳು ಅಪರಾಧ ಎಸಗಿದರೆ, ಆ ಸಿಮ್ ಯಾರ ಹೆಸರಿನಲ್ಲಿ ನೋಂದಣಿಯಾಗಿದೆಯೋ ಅವರೇ ಹೊಣೆಗಾರರಾಗಬೇಕಾಗಬಹುದು.

ಇತ್ತೀಚೆಗೆ ದೂರಸಂಪರ್ಕ ಇಲಾಖೆ ಹೊರಡಿಸಿರುವ ಮಾರ್ಗಸೂಚಿಗಳ ಪ್ರಕಾರ, ಸಿಮ್ ಕಾರ್ಡ್ ಅನ್ನು ವಂಚನೆಗೆ ಬಳಸಿದರೆ ಅಥವಾ ಕಾನೂನುಬಾಹಿರವಾಗಿ ಬೇರೆಯವರಿಗೆ ಬಳಸಲು ನೀಡಿದರೆ ₹50 ಲಕ್ಷದವರೆಗೆ ದಂಡ ಹಾಗೂ 3 ವರ್ಷಗಳವರೆಗೆ ಜೈಲು ಶಿಕ್ಷೆ ವಿಧಿಸುವ ಸಾಧ್ಯತೆ ಇದೆ ಎಂದು ವರದಿಯಾಗಿದೆ. ಹೀಗಾಗಿ ನಿಮ್ಮ ಹೆಸರಿನಲ್ಲಿರುವ ಸಿಮ್ ಕಾರ್ಡ್‌ಗಳನ್ನು ಬೇರೆಯವರಿಗೆ ಬಳಸಲು ನೀಡದಿರುವುದು ಅತ್ಯಂತ ಮುಖ್ಯವಾಗಿದೆ.

ಇತ್ತೀಚಿನ ದಿನಗಳಲ್ಲಿ ಒಬ್ಬರ ಹೆಸರಿನಲ್ಲಿ ಹಲವು ಸಿಮ್ ಕಾರ್ಡ್‌ಗಳನ್ನು ಪಡೆದು, ಅವುಗಳನ್ನು ಬಳಸಿಕೊಂಡು ಸೈಬರ್ ಅಪರಾಧಿಗಳು ವಂಚನೆ ನಡೆಸುತ್ತಿರುವ ಪ್ರಕರಣಗಳು ಹೆಚ್ಚಾಗುತ್ತಿವೆ. ಇಂತಹ ದುರ್ಬಳಕೆಗೆ ಕಡಿವಾಣ ಹಾಕುವ ಉದ್ದೇಶದಿಂದಲೇ ಈ ನಿಯಮಗಳನ್ನು ಜಾರಿಗೆ ತರಲಾಗಿದೆ ಎಂದು ದೂರಸಂಪರ್ಕ ಇಲಾಖೆ ತಿಳಿಸಿದೆ. ಗ್ರಾಹಕರು ತಮ್ಮ ಹೆಸರಿನಲ್ಲಿ ನೋಂದಣಿಯಾಗಿರುವ ಸಿಮ್ ಕಾರ್ಡ್‌ಗಳ ಬಗ್ಗೆ ಎಚ್ಚರಿಕೆಯಿಂದ ಇರಬೇಕು ಎಂದು ಇಲಾಖೆ ಸೂಚಿಸಿದೆ.

ಯಾರಾದರೂ ಮೊಬೈಲ್ ಫೋನ್ ಅಥವಾ ಸಿಮ್ ಕಾರ್ಡ್ ಕಳೆದುಕೊಂಡರೆ, ತಕ್ಷಣವೇ ಆ ಸಿಮ್ ಅನ್ನು ಬ್ಲಾಕ್ ಮಾಡಿಸಬೇಕು ಅಥವಾ ಸಮೀಪದ ಪೊಲೀಸ್ ಠಾಣೆಗೆ ತೆರಳಿ ದೂರು ನೀಡಬೇಕು ಎಂದು ಸೂಚಿಸಲಾಗಿದೆ.

ಅಲ್ಲದೆ, ಅನಗತ್ಯವಾಗಿ ಯಾರಿಗೂ ನಿಮ್ಮ ಗುರುತಿನ ದಾಖಲೆಗಳನ್ನು ಬಳಸಿ ಸಿಮ್ ಕಾರ್ಡ್ ಪಡೆಯಲು ಅವಕಾಶ ನೀಡಬಾರದು. ಅಗತ್ಯವಿಲ್ಲದಿದ್ದರೆ ಒಂದಕ್ಕಿಂತ ಹೆಚ್ಚು ಸಿಮ್ ಕಾರ್ಡ್‌ಗಳನ್ನು ಪಡೆಯುವುದನ್ನೂ ತಪ್ಪಿಸಬೇಕು ಎಂದು ದೂರಸಂಪರ್ಕ ಇಲಾಖೆ ಸಲಹೆ ನೀಡಿದೆ.

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

LEAVE A REPLY

Please enter your comment!
Please enter your name here

Most Popular