HomeLatest Newsಸರಳ, ಸಾಮೂಹಿಕ, ಅಂತರ್ಜಾತಿ ವಿವಾಹಗಳು ಸಮಾನತೆ ತರಲು ಸಹಾಯಕ; ಮುಖ್ಯಮಂತ್ರಿ ಸಿದ್ದರಾಮಯ್ಯ

ಸರಳ, ಸಾಮೂಹಿಕ, ಅಂತರ್ಜಾತಿ ವಿವಾಹಗಳು ಸಮಾನತೆ ತರಲು ಸಹಾಯಕ; ಮುಖ್ಯಮಂತ್ರಿ ಸಿದ್ದರಾಮಯ್ಯ

ಧಾರವಾಡ: ಬಸವಣ್ಣನವರು ಕೇಳಜಾತಿಯವರೊಂದಿಗೆ ಮೆಲ್ಜಾತಿಯವರ ಮದುವೆ ಮಾಡಿ, ಅಂದೇ ಸಮಾಜದಲ್ಲಿ ಸಮಾನತೆ ತರಲು ಮುನ್ನುಡಿ ಬರೆದರು. ಸರ್ವ ಧರ್ಮಗಳ ವಧುವರರು ಸಾಮೂಹಿಕ ವಿವಾಹ ಆಗುವದರೊಂದಿಗೆ ಸಮಾಜದಲ್ಲಿ ಅಂತರ್ಜಾತಿ ಮದುವೆಗಳು ಆಗಬೇಕು. ಇದರಿಂದ ಸಮಾಜದ ಸರ್ವರಲ್ಲಿ ಸಮಾನತೆ ತರಲು ಸಹಾಯವಾಗುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ಅವರು ನವಲಗುಂದ ಪಟ್ಟಣದ ಮಾಡೆಲ್ ಹೈಸ್ಕೂಲ್ ಮೈದಾನದಲ್ಲಿ ಜರುಗಿದ ಶಾಸಕ ಎನ್.ಹೆಚ್.ಕೋನರಡ್ಡಿ ಅವರ ಮಗ ನವೀನಕುಮಾರ ವಿವಾಹ ಆರತಕ್ಷತೆ ಅಂಗವಾಗಿ ಆಯೋಜಿಸಿದ್ದ 75 ಜೋಡಿಗಳ ಉಚಿತ ಸಾಮೂಹಿಕ ವಿವಾಹ ಕಾರ್ಯಕ್ರಮದಲ್ಲಿ ಭಾಗವಹಿಸಿ, ಶುಭಾಶಯ ಕೋರಿ ಮಾತನಾಡಿದರು.

ಶಾಸಕ‌ಕೋನರಡ್ಡಿ ಅವರು 75 ಜೋಡಿಗಳ ಸಾಮೂಹಿಕ ಮದುವೆಗಳನ್ನು ಏರ್ಪಡು ಮಾಡಿದ್ದಾರೆ. ಮುಸ್ಲಿಂ ಮತ್ತು ಕ್ರಿಶ್ಚಿಯನ್ ಈ ಸಂದರ್ಭದಲ್ಲಿ ಮದುವೆಯಾಗುತ್ತಿರುವುದು ಸಂತೋಷದ ಕ್ಷಣವಾಗಿದೆ. ನಮ್ಮ ಸಮಾಜದಲ್ಲಿ ಹಿಂದೂ, ಮುಸ್ಲಿಂ, ಕ್ರೈಸ್ತ, ಬೌದ್ಧರು ಎಲ್ಲರೂ ಮನುಷ್ಯರಾಗಿ ಬದುಕಬೇಕು ಮತ್ತು ಸಮಾಜದಲ್ಲಿ ಜಾತಿ ವ್ಯವಸ್ಥೆಯು ಹೋಗಲಾಡಬೇಕು ಎಂದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಜಾತಿ ವ್ಯವಸ್ಥೆಯು ಹೋಗಬೇಕೆಂದರೆ ಅಂತರ್ಜಾತಿಯ ವಿವಾಹಗಳು ಹೆಚ್ಚು ಹೆಚ್ಚು ಆಗಬೇಕು ಮತ್ತು ಬಸವಣ್ಣವರು ದಲಿತ ಮತ್ತು ಮೇಲಜಾತಿಯ ವಧುವರರಿಗೆ ಮದುವೆ ಮಾಡಿ ಜಾತಿ ವ್ಯವಸ್ಥೆಯನ್ನು ಸಮಾಜದಿಂದ ಹೋಗಲಾಡಿಸಬೇಕೆಂದು ಅವರು ಮದುವೆಯನ್ನು ಮಾಡಿದ್ದರು ಎಂದು ಹೇಳಿದರು.

ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಮಾತನಾಡಿ, ನವಲಗುಂದದಲ್ಲಿ ಐತಿಹಾಸಿಕ ಕಾರ್ಯಕ್ರಮವನ್ನು ಶಾಸಕರಾದ ಎನ್. ಹೆಚ್. ಕೋನರೆಡ್ಡಿ ಮಾಡಿದ್ದಾರೆ. ಅವರು ಬಡವರು ಮತ್ತು ದಲಿತರ ಬಗ್ಗೆ ಹೋರಾಟವನ್ನು ಮಾಡುತ್ತಾ ಬಂದವರು. ಒಬ್ಬ ಒಳ್ಳೆಯ ನಾಯಕ ಎಂದು ಹೇಳಿದರು.

ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಅವರು ಮಾತನಾಡಿ, ಶಾಸಕ ಎನ್.ಎಚ್. ಕೋನರಡ್ಡಿ ಅವರ ಸುಪುತ್ರನ ವಿವಾಹ ಸಂದರ್ಭದಲ್ಲಿ ರಿಸೆಪ್ಶನ್ ನಡೆಯುತ್ತಿರುವ ದಿವಸ 75 ಜೋಡಿಗಳ ಸಾಮೂಹಿಕ ವಿವಾಹವನ್ನು ಮಾಡಿದ್ದು, ಇತರರಿಗೆ ಮಾದರಿ ಎಂದು ಹೇಳಿದರು.

ಶಾಸಕರಾದ ಎನ್.ಹೆಚ್. ಕೋನರಡ್ಡಿ ಅವರು ಮಾತನಾಡಿ, ನವಲಗುಂದದಲ್ಲಿ ದೊಡ್ಡ ಇತಿಹಾಸ ಸೃಷ್ಟಿಯಾಗಿದೆ. 75 ಜೋಡಿಯ ಸರ್ವ ಧರ್ಮದ ಮದುವೆಯನ್ನು ನಮ್ಮ ಕ್ಷೇತ್ರದ ಜನ ಮಾಡಿದ್ದಾರೆ ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ರಾಜ್ಯ ಸಚಿವ ಸಂಪುಟದ ಸಚಿವರಾದ ಕೆ.ಜೆ.ಜಾರ್ಜ್, ಎಚ್.ಸಿ.ಮಹಾದೇವಪ್ಪ, ಕೃಷ್ಣ ಭೈರೆಗೌಡ, ರಾಮಲಿಂಗಾರಡ್ಡಿ, ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್, ಶಾಸಕರಾದ ಬಸವರಾಜ ರಾಯರೆಡ್ಡಿ, ಪ್ರಸಾದ ಅಬ್ಬಯ್ಯ, ಬಸವರಾಜ ಶಿವಣ್ಣವರ, ಹೆಸ್ಕಾಂ ಅಧ್ಯಕ್ಷ ಸೈಯದ್ ಅಜ್ಜಂಪೀರ ಖಾದ್ರಿ, ವಿಪ ಮಾಜಿ ಸದಸ್ಯ ಮೋಹನ ಲಿಂಬಿಕಾಯಿ ಸೇರಿದಂತೆ ವಿವಿಧ ಸಚಿವರು, ಶಾಸಕರು, ವಿಧಾನ ಪರಿಷತ್ತ ಸದಸ್ಯರು, ಮಾಜಿ ಸಚಿವರು, ಶಾಸಕರು, ವಿವಿಧ ಜನ್ರತಿನಿಧಿಗಳು, ಗಣ್ಯರು ಭಾಗವಹಿಸಿ, ನವ ವಧುವರರಿಗೆ ಆಶಿರ್ವದಿಸಿ, ಶುಭಾಶಯ ಕೋರಿದರು.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular