ಬೆಂಗಳೂರು : ಪತಿಯೋರ್ವ ತುರೆಮಣೆಯಿಂದ ಹೊಡೆದು ಪತ್ನಿಯನ್ನು ಕೊಲೆಗೈದ ಘಟನೆ ಬೆಂಗಳೂರು ದಕ್ಷಿಣ ಜಿಲ್ಲೆಯ ಮಾಗಡಿ ತಾಲೂಕಿನ ಮತ್ತಿಕೆರೆಯಲ್ಲಿ ನಡೆದಿದೆ.
ಅಡುಗೆ ಮಾಡುವ ವಿಚಾರಕ್ಕೆ ಗಂಡ ಹೆಂಡತಿ ನಡುವೆ ಜಗಳ ನಡೆದಿದೆ. ಜಗಳ ತಾರಕಕ್ಕೇರಿದ್ದು ಪತಿ ಪತ್ನಿ ಮೇಲೆ ತುರೆಮಣೆಯಿಂದ ಹಲ್ಲೆ ನಡೆಸಿ ಎಸ್ಕೇಪ್ ಆಗಲು ಯತ್ನಿಸಿದ್ದಾನೆ. ತಿಮ್ಮಮ್ಮ (65) ಕೊಲೆಯಾದ ಮಹಿಳೆ. ಪತಿ ರಂಗಯ್ಯನನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಈ ಕುರಿತು ಮಾಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
TAGGED:ಪತಿ