HomeEntertainmentBIG NEWS: ಖ್ಯಾತ ಗಾಯಕಿ ಮಂಗ್ಲಿ ಕಾರು ಅಪಘಾತ; ಗಾಯಕಿ ಸೇರಿ ಮೂವರಿಗೆ ಗಾಯ

BIG NEWS: ಖ್ಯಾತ ಗಾಯಕಿ ಮಂಗ್ಲಿ ಕಾರು ಅಪಘಾತ; ಗಾಯಕಿ ಸೇರಿ ಮೂವರಿಗೆ ಗಾಯ

ಹೈದರಾಬಾದ್: ತೆಲುಗು ಚಿತ್ರರಂಗದ ಜನಪ್ರಿಯ ಗಾಯಕಿ ಮಂಗ್ಲಿ ಪ್ರಯಾಣಿಸುತ್ತಿದ್ದ ಕಾರು ಅಪಘಾತಕ್ಕೀಡಾಗಿದ್ದು, ಗಾಯಕಿ ಸೇರಿದಂತೆ ಮೂವರು ಗಾಯಗೊಂಡಿರುವ ಘಟನೆ ನಡೆದಿದೆ.

ರಂಗಾರೆಡ್ಡಿ ಜಿಲ್ಲೆಯ ನಂದಿಗ್ರಾಮ ಕನ್ಹಾ ಆಧ್ಯಾತ್ಮಿಕ ಉತ್ಸವದಲ್ಲಿ ಮಂಗ್ಲಿ ಭಾಗವಹಿಸಿದ್ದರು. ಕಾರ್ಯಕ್ರಮ ಮುಗಿಸಿ ಹೈದರಾಬಾದ್ ಗೆ ಕಾರಿನಲ್ಲಿ ಪ್ರಯಾಣಿಸುತ್ತಿದ್ದಾಗ ತಡರಾತ್ರಿ ಶಂಶಾಬಾದ್ ನ ತೊಂಡುಪಲ್ಲಿ ಬಳಿ ಕಾರು ಅಪಘಾತಕ್ಕೀಡಾಗಿದೆ.

ಮಂಗ್ಲಿ ಪ್ರಯಾಣಿಸುತ್ತಿದ್ದ ಕಾರಿಗೆ ಟ್ರಕ್ ವೊಂದು ಗುದ್ದಿದೆ. ಅಪಘಾತದಲ್ಲಿ ಗಾಯಕಿ ಮಂಗ್ಲಿ ಹಾಗೂ ಕಾರಿನಲ್ಲಿದ್ದ ಇನ್ನು ಇಬ್ಬರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ತೆಲುಗು ಚಿತ್ರರಂಗದಲ್ಲಿ ಖ್ಯಾತಿ ಪಡೆದಿರುವ ಗಾಯಕಿ ಮಂಗ್ಲಿ ’ಹೂ ಅಂತಿಯಾ ಮಾವ…’ ಹಾಡಿನ ಮೂಲಕ ಕನ್ನಡ ಚಿತ್ರರಂಗಕ್ಕೂ ಚಿರಪರಿಚಿತರಾಗಿದ್ದಾರೆ. ಇನ್ನು ಗಾಯಕಿ ಮಂಗ್ಲಿ ಕಾರು ಅಪಘಾತವಾಗಿರುವ ಬಗ್ಗೆ ದಿವ್ಯಪ್ರಿಯಾ ಎಂಬುವವರು ಸಾಮಾಜಿಕ ಜಾಲತಾಣಗಳಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ. ಸದ್ಯ ಹೆಚ್ಚಿನ ಅನಾಹುತ ಸಂಭವಿಸಿಲ್ಲ ಎಂದು ತಿಳಿದುಬಂದಿದೆ.

For Latest News Updates, Join Our Whatsapp Community🚩
RELATED ARTICLES

Most Popular