HomeLatest Newsಐತಿಹಾಸಿಕ ಸೂಳೆಕೆರೆ ಪ್ರವಾಸಿ ತಾಣದಲ್ಲಿ ಏಕ ಬಳಕೆ ಪ್ಲಾಸ್ಟಿಕ್, ಹೊರಗಿನ ಆಹಾರ ಪದಾರ್ಥ ಸಂಪೂರ್ಣ ನಿಷೇಧ

ಐತಿಹಾಸಿಕ ಸೂಳೆಕೆರೆ ಪ್ರವಾಸಿ ತಾಣದಲ್ಲಿ ಏಕ ಬಳಕೆ ಪ್ಲಾಸ್ಟಿಕ್, ಹೊರಗಿನ ಆಹಾರ ಪದಾರ್ಥ ಸಂಪೂರ್ಣ ನಿಷೇಧ

ದಾವಣಗೆರೆ: ದಾವಣಗೆರೆ ಜಿಲ್ಲೆಯು ರಾಜ್ಯದ ಮಧ್ಯಭಾಗದಲ್ಲಿದ್ದು, ಜಿಲ್ಲೆಯ ಚನ್ನಗಿರಿ ತಾಲ್ಲೂಕಿನ ಐತಿಹಾಸಿಕ ಹಾಗೂ ಪ್ರಾಕೃತಿಕ ಸುಂದರ ಪ್ರವಾಸಿ ತಾಣವನ್ನು ಒಳಗೊಂಡ ಏಷ್ಯಾದ 2ನೇ ಅತೀ ದೊಡ್ಡ ಮಾನವ ನಿರ್ಮಿತ ಶಾಂತಿಸಾಗರ ಜಿಲ್ಲೆಯ ಪ್ರವಾಸಿ ತಾಣಗಳ ಪಟ್ಟಿಯಲ್ಲಿ ಪ್ರಮುಖ ಪ್ರವಾಸಿ ತಾಣವಾಗಿದೆ.

ಪ್ರವಾಸಿಗರ ಅನುಕೂಲಕ್ಕಾಗಿ ಪ್ರವಾಸೋದ್ಯಮ ಇಲಾಖೆಯಿಂದ ಉದ್ಯಾನವನ, ಪಾರ್ಕಿಂಗ್, ಬೋಟಿಂಗ್ ಸೌಲಭ್ಯ ಹಾಗೂ ವಾಣಿಜ್ಯ ಕೊಠಡಿ, ಶೌಚಾಲಯಗಳನ್ನು ನಿರ್ಮಿಸಲಾಗಿದೆ. ಒಂದೆಡೆ ಪ್ರವಾಸಿಗರನ್ನು ಸೆಳೆಯುತ್ತಿರುವುದರಿಂದ ಪ್ರತಿ ದಿನ ಹೆಚ್ಚಿನ ಪ್ರಮಾಣದಲ್ಲಿ ಪ್ರವಾಸಿಗರು ಬೇಟಿ ನೀಡುತ್ತಾರೆ. ಇನ್ನೊಂದೆಡೆ ಅತಿಯಾದ ಪ್ಲಾಸ್ಟಿಕ್ ಬಳಕೆಯಿಂದ ನೈಸರ್ಗಿಕ ವಾತಾವರಣ ಕಲುಷಿತಗೊಳ್ಳುತ್ತಿದೆ.

ಆದ್ದರಿಂದ ಪ್ರವಾಸಿ ತಾಣದ ಬೋಟಿಂಗ್ ಸ್ಥಳದಲ್ಲಿ ಪ್ರವಾಸಿಗರು ನೀರಿನ ಬಾಟಲಿ, ಪಾನೀಯ ಬಾಟಲಿ, ಪ್ಲಾಸ್ಟಿಕ್ ಕವರ್, ಚಾಕಲೇಟ್ ಕವರ್, ಚಿಪ್ಸ್ ಪ್ಯಾಕೇಟ್ ಇತ್ಯಾದಿ ಏಕ ಬಳಕೆಯ ಪ್ಲಾಸ್ಟಿಕ್ ಹಾಗೂ ಹೊರಗಿನ ಯಾವುದೇ ತಿಂಡಿ ಮತ್ತು ಆಹಾರ ಪದಾರ್ಥಗಳನ್ನು ಬೋಟಿಂಗ್ ಸ್ಥಳದಲ್ಲಿ ಸಂಪೂರ್ಣ ನಿಷೇದಿಸಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಒಂದು ವೇಳೆ ಪ್ರವಾಸಿ ತಾಣ ವ್ಯಾಪ್ತಿಯಲ್ಲಿ ಪ್ಲಾಸ್ಟಿಕ್ ವಸ್ತುಗಳನ್ನು ಬಳಸಿದಲ್ಲಿ ರೂ.100 ದಂಡ ವಿಧಿಸಲಾಗುವುದು ಎಂದು ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಪ್ರವಾಸೋದ್ಯಮ ಅಭಿವೃದ್ಧಿ ಸಮಿತಿ ಅಧ್ಯಕ್ಷ ಜಿ.ಎಂ.ಗಂಗಾಧರಸ್ವಾಮಿ ತಿಳಿಸಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular