HomeInternationalSHOCKING : ಒಂದೇ ಕುಟುಂಬದ 13 ಮಂದಿಗೆ ಹಾಲಿನಲ್ಲಿ ವಿಷ ಬೆರೆಸಿ ಕೊಲೆ ಮಾಡಿದ ಪಾಪಿಗಳು..!

SHOCKING : ಒಂದೇ ಕುಟುಂಬದ 13 ಮಂದಿಗೆ ಹಾಲಿನಲ್ಲಿ ವಿಷ ಬೆರೆಸಿ ಕೊಲೆ ಮಾಡಿದ ಪಾಪಿಗಳು..!

ಕರಾಚಿ : ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ ಆಘಾತಕಾರಿ ಘಟನೆ ನಡೆದಿದೆ. ಜಮೀನು ವಿವಾದಕ್ಕೆ ಸಂಬಂಧಿಸಿದಂತೆ ಒಂದೇ ಕುಟುಂಬದ 13 ಮಂದಿಗೆ ಹಾಲಿನಲ್ಲಿ ವಿಷ ಬೆರೆಸಿ ಕೊಲೆ ಮಾಡಿರುವ ಘಟನೆ ನಡೆದಿದೆ.

ಘಟನೆಯ ವಿವರಗಳ ಬಗ್ಗೆ ಪೊಲೀಸರು ಮಾಧ್ಯಮಗಳಿಗೆ ಮಾಹಿತಿ ನೀಡಿದ್ದಾರೆ. ಖೈರ್ಪುರ್ ಬಳಿಯ ಹೈಬತ್ ಖಾನ್ ಬ್ರೋಹಿ ಗ್ರಾಮದಲ್ಲಿ ಆಗಸ್ಟ್ 19 ರಂದು ಈ ಘಟನೆ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.ಮೃತರನ್ನು ಗುಲ್ ಬೇಗ್ ಬ್ರೋಹಿ, ಅವರ ಪತ್ನಿ, ಐವರು ಪುತ್ರರು ಎಂದು ಗುರುತಿಸಲಾಗಿದೆ.

ಪೊಲೀಸರು ಮೂವರನ್ನು ಅವರ ಹೆಣ್ಣುಮಕ್ಕಳು ಮತ್ತು ಇತರ ಮೂವರನ್ನು ಸಂಬಂಧಿಕರು ಎಂದು ಗುರುತಿಸಿದ್ದಾರೆ. ಭೂ ವಿವಾದದ ಹಿನ್ನೆಲೆ ಈ ಘಟನೆ ನಡೆದಿದೆ ಎಂದು ಪೊಲೀಸ್ ತನಿಖೆಯಿಂದ ತಿಳಿದುಬಂದಿದೆ. ಸಕುರ್ನ ರಾಸಾಯನಿಕ ಪ್ರಯೋಗಾಲಯದಲ್ಲಿ ನಡೆಸಿದ ಪರೀಕ್ಷೆಗಳಲ್ಲಿ ಕುಟುಂಬ ಸದಸ್ಯರು ಸಾವನ್ನಪ್ಪಿದ ದಿನದಂದು ಸೇವಿಸಿದ ಹಾಲಿನಲ್ಲಿ ವಿಷಕಾರಿ ವಸ್ತುಗಳು ಇರುವುದು ತಿಳಿದುಬಂದಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಅವರ ದೇಹದಲ್ಲಿ ವಿಷಕಾರಿ ವಸ್ತುಗಳ ಉಪಸ್ಥಿತಿಯನ್ನು ವರದಿ ದೃಢಪಡಿಸಿದೆ.
ಪೊಲೀಸರು ಈ ಪ್ರಕರಣವನ್ನು ಎಲ್ಲಾ ಕೋನಗಳಿಂದ ತನಿಖೆ ನಡೆಸುತ್ತಿದ್ದಾರೆ ಎಂದು ಖೈರ್ಪುರ್ ಹಿರಿಯ ಪೊಲೀಸ್ ವರಿಷ್ಠಾಧಿಕಾರಿ (ಎಸ್ಎಸ್ಪಿ) ಡಾ.ಸಮೀವುಲ್ಲಾ ಸುಮ್ರೊ ಹೇಳಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular