HomeKarnatakaಎಸ್ಐಆರ್: 2002ರ ವಿವರ ಸಲ್ಲಿಕೆ ಕಡ್ಡಾಯವಲ್ಲ

ಎಸ್ಐಆರ್: 2002ರ ವಿವರ ಸಲ್ಲಿಕೆ ಕಡ್ಡಾಯವಲ್ಲ

ಬೆಂಗಳೂರು: ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ(ಎಸ್ಐಆರ್) ನಲ್ಲಿ 2002 ರ ವಿವರ ಸಲ್ಲಿಕೆ ಕಡ್ಡಾಯವಲ್ಲ ಎಂದು ರಾಜ್ಯ ಮುಖ್ಯ ಚುನಾವಣಾ ಅಧಿಕಾರಿಯ ವಿ. ಅನ್ಬುಕುಮಾರ್ ಸ್ಪಷ್ಟಪಡಿಸಿದ್ದಾರೆ.

ಆಗಸ್ಟ್ 8ರೊಳಗೆ ನಾಗರೀಕರು ತಮ್ಮ ನಮೂನೆಗಳನ್ನು ಸಲ್ಲಿಸುವುದು ಕಡ್ಡಾಯವಾಗಿದೆ ಎಂದು ತಿಳಿಸಿದ್ದಾರೆ. ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರೀಕ್ಷೆಯಲ್ಲಿ 2002ರ ಮತದಾರರ ಪಟ್ಟಿಯಲ್ಲಿ ವಿವರ ಇಲ್ಲದಿದ್ದರೂ ವೈಯಕ್ತಿಕ ವಿವರಗಳನ್ನು ಭರ್ತಿ ಮಾಡಿ ಎನ್ಯೂಮರೇಶನ್ ಅರ್ಜಿಯನ್ನು ಬಿಎಲ್ಒ ಗಳಿಗೆ ಸಲ್ಲಿಸಬಹುದಾಗಿದೆ.

2002ರ ದಾಖಲೆಗಳು ಲಭ್ಯವಿಲ್ಲದಿದ್ದರೂ ನಮೂನೆ ಸಲ್ಲಿಸಲು ಅವಕಾಶವಿದ್ದು, ನಂತರ ಅಗತ್ಯವಿದ್ದರೆ ನಮೂನೆಯಲ್ಲಿ ಉಲ್ಲೇಖಿಸಿರುವ 12 ದಾಖಲೆಗಳಲ್ಲಿ ಒಂದನ್ನು ಸಲ್ಲಿಸುವಂತೆ ನೋಟಿಸ್ ನೀಡಲಾಗುವುದು. ಯಾವ ದಾಖಲೆ ಬೇಕು ಎಂಬುದನ್ನು ಸಂಬಂಧಿಸಿದ ಚುನಾವಣಾ ನೋಂದಣಾಧಿಕಾರಿ ಅಂತಿಮವಾಗಿ ನಿರ್ಧರಿಸಲಿದ್ದಾರೆ ಎಂದು ತಿಳಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಮ್ಯಾಪಿಂಗ್ ಆಗದೆ ಇದ್ದವರು ಎನ್ಯೂಮರೇಶನ್ ಅರ್ಜಿಯ ಕೊನೆಯ ಕಾಲಲ್ಲಿ ತಮ್ಮ ವೈಯಕ್ತಿಕ ವಿವರಗಳನ್ನು ಭರ್ತಿ ಮಾಡಿ ಸಲ್ಲಿಸಬೇಕು. ಅಂತಹವರ ಹೆಸರು ಕರಡು ಮತದಾರರ ಪಟ್ಟಿಯಲ್ಲಿ ಉಳಿದುಕೊಳ್ಳಲಿದೆ. ಕರಡು ಮತದಾರರ ಪಟ್ಟಿ ಪ್ರಕಟವಾದ ನಂತರ ನೋಂದಣಾಧಿಕಾರಿ ಆ ಮತದಾರರಿಗೆ ನೋಟಿಸ್ ನೀಡಿ ಅಂತಹ ಮತದಾರರು ಅಗತ್ಯ ದಾಖಲೆ ಪತ್ರಗಳೊಂದಿಗೆ ಉತ್ತರ ನೀಡಬೇಕಾಗುತ್ತದೆ. ಅರ್ಜಿ ವಿತರಣೆ ಮತ್ತು ಸಂಗ್ರಹದ ಹಂತದಲ್ಲಿ ಮತದಾರರು ಯಾವುದೇ ದಾಖಲೆ ಸಲ್ಲಿಸುವ ಅಗತ್ಯವಿಲ್ಲ. ನೋಟಿಸ್ ಬಂದರಷ್ಟೇ ದಾಖಲೆ ಸಲ್ಲಿಸಬೇಕಾಗುತ್ತದೆ. 2002ರ ಮತದಾರರ ವಿವರ ಭರ್ತಿ ಮಾಡದೆ ಅರ್ಜಿ ಸಲ್ಲಿಸಿದವರು ಅಗತ್ಯ ದಾಖಲೆ ಪತ್ರಗಳನ್ನು ಸಿದ್ಧವಾಗಿಟ್ಟುಕೊಳ್ಳಬಹುದು ಎಂದು ಹೇಳಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

Most Popular