HomeKarnatakaಇಂದು ಮತದಾರರ ಕರಡು ಪಟ್ಟಿ ಪ್ರಕಟ: ನಿಮ್ಮ ಹೆಸರನ್ನು ಹೀಗೆ ಚೆಕ್ ಮಾಡಿಕೊಳ್ಳಿ

ಇಂದು ಮತದಾರರ ಕರಡು ಪಟ್ಟಿ ಪ್ರಕಟ: ನಿಮ್ಮ ಹೆಸರನ್ನು ಹೀಗೆ ಚೆಕ್ ಮಾಡಿಕೊಳ್ಳಿ

ಬೆಂಗಳೂರು: ರಾಜ್ಯದಲ್ಲಿ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ(ಎಸ್ಐಆರ್) ಪ್ರಕ್ರಿಯೆ ಮೊದಲ ಹಂತ ಮುಕ್ತಾಯವಾಗಿದ್ದು, ಸೋಮವಾರ ಕರಡು ಮತದಾರರ ಪಟ್ಟಿ ಪ್ರಕಟವಾಗಲಿದೆ.

ರಾಜ್ಯದ ಒಟ್ಟು 5.54 ಕೋಟಿ ಮತದಾರರ ಪೈಕಿ 4.46 ಕೋಟಿ ಮತದಾರರ ಹೆಸರು ಕರಡು ಪಟ್ಟಿಯಲ್ಲಿ ಇರಲಿದೆ. ಸೆ. 23ರವರೆಗೆ ಆಕ್ಷೇಪಣಿ ಸಲ್ಲಿಸಲು ಅವಕಾಶವಿದೆ. ceo.karnataka.gov.in ನಲ್ಲಿ ಕರಡು ಮತದಾರರ ಪಟ್ಟಿ ಲಭ್ಯವಾಗಲಿದೆ.

ಎಸ್ಐಆರ್‌ ಗೆ ಮೊದಲು ರಾಜ್ಯದಲ್ಲಿ 5.54 ಕೋಟಿ ಮತದಾರರಿದ್ದರು. ಎಸ್ಐಆರ್ ವೇಳೆ 1.08 ಕೋಟಿ ಜನರನ್ನು ಕರಡು ಮತದಾರರು ಪಟ್ಟಿಗೆ ಸೇರ್ಪಡೆ ಮಾಡಲಾಗಿಲ್ಲ. ಈಗ 4.46 ಕೋಟಿ ಮತದಾರರ ಹೆಸರು ಪ್ರಕಟವಾಗಲಿದೆ. 43.8 ಲಕ್ಷ ಮಂದಿಗೆ ನೋಟಿಸ್ ಬರಲಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಎಸ್ಐಆರ್ ಪ್ರಕ್ರಿಯೆ ವೇಳೆ 1.08 ಕೋಟಿ ಮತದಾರರನ್ನು ಎ.ಎಸ್.ಡಿ.ಡಿ.ಒ. ವರ್ಗಕ್ಕೆ ಸೇರಿಸಲಾಗಿದ್ದು, ಈ ಮತದಾರರ ಹೆಸರು ಕರಡು ಮತದಾರರ ಪಟ್ಟಿಯಲ್ಲಿ ಇರುವುದಿಲ್ಲ. ಉಳಿದ 4.46 ಕೋಟಿ ಮತದಾರರ ಹೆಸರು ಪಟ್ಟಿಯಲ್ಲಿ ಪ್ರಕಟವಾಗಲಿದೆ. ಕರಡು ಮತದಾರರ ಪಟ್ಟಿಯಿಂದ ಹೊರಗೊಳಿಯುವ ಮತದಾರರ ಪೈಕಿ ಗೈರು, ಸ್ಥಳಾಂತರಗೊಂಡ ಮತದಾರರು ನಿಗದಿತ ದಾಖಲೆಗಳೊಂದಿಗೆ ಹೊಸದಾಗಿ ಫಾರ್ಮ್ 6 ಸಲ್ಲಿಕೆ ಮಾಡಬೇಕು. ಇದರೊಂದಿಗೆ ಅಕ್ಟೋಬರ್ 1ಕ್ಕೆ 18 ವರ್ಷ ತುಂಬುವ ಯುವ ಮತದಾರರು ನಿಗದಿತ ದಾಖಲೆಗಳೊಂದಿಗೆ ಫಾರ್ಮ್ 6 ಸಲ್ಲಿಸಿ ಮತದಾರರ ಪಟ್ಟಿಗೆ ಸೇರ್ಪಡೆಯಾಗಬಹುದು.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

Most Popular