HomeKarnatakaಎಸ್​ಐಆರ್ ಪ್ರಕ್ರಿಯೆಯಲ್ಲಿ ಲೋಪ ಒಪ್ಪಿಕೊಂಡ ಚುನಾವಣಾ ಆಯೋಗ

ಎಸ್​ಐಆರ್ ಪ್ರಕ್ರಿಯೆಯಲ್ಲಿ ಲೋಪ ಒಪ್ಪಿಕೊಂಡ ಚುನಾವಣಾ ಆಯೋಗ

ಬೆಂಗಳೂರು: ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (ಎಸ್​ಐಆರ್) ಪ್ರಕ್ರಿಯೆ ಪೂರ್ಣಗೊಂಡ ಬೆನ್ನಲ್ಲೇ ಹಲವು ಗಂಭೀರ ಲೋಪಗಳು ಬೆಳಕಿಗೆ ಬಂದಿವೆ. ರಾಜ್ಯದಲ್ಲಿ ಒಂದೇ ವ್ಯಕ್ತಿಯ ಹೆಸರಿನಲ್ಲಿ ಹಲವು ವೋಟರ್ ಐಡಿಗಳು ಸೃಷ್ಟಿಯಾಗಿರುವುದು ಹಾಗೂ ಒಂದೇ ಮತದಾರರ ಹೆಸರು ಎರಡು ವಿಧಾನಸಭಾ ಕ್ಷೇತ್ರಗಳ ಮತದಾರರ ಪಟ್ಟಿಯಲ್ಲಿ ಕಾಣಿಸಿಕೊಂಡಿದೆ.

ಈ ಕುರಿತು ರಾಜ್ಯದ ಮುಖ್ಯ ಚುನಾವಣಾಧಿಕಾರಿ ಕಚೇರಿ ಕೂಡ ಪ್ರತಿಕ್ರಿಯಿಸಿದ್ದು, ರಾಜ್ಯದಲ್ಲಿ ಎಸ್ಐಆರ್ ಪ್ರಕ್ರಿಯೆಯಲ್ಲಿ ಲೋಪಗಳಾಗಿರುವುದನ್ನು ಒಪ್ಪಿಕೊಂಡಿದೆ. ಮತದಾರರ ಪಟ್ಟಿಯಲ್ಲಿನ ದೋಷಗಳನ್ನು ಸರಿಪಡಿಸುವಂತೆ ಸಾರ್ವಜನಿಕ ವಲಯದಿಂದ ಒತ್ತಾಯ ಕೇಳಿಬರುತ್ತಿರುವ ಬೆನ್ನಲ್ಲೇ ಈ ಬೆಳವಣಿಗೆ ಚುನಾವಣಾ ವ್ಯವಸ್ಥೆಯ ನಿಖರತೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಮುಖ್ಯ ಚುನಾವಣಾಧಿಕಾರಿ ಕಚೇರಿ ಶನಿವಾರ ನೀಡಿರುವ ಸ್ಪಷ್ಟನೆಯ ಪ್ರಕಾರ, ಮತದಾರರ ಅರ್ಜಿಗಳನ್ನು ನಿರ್ವಹಿಸುವಾಗ ಎರಡು ರೀತಿಯ ಲೋಪಗಳು ಸಂಭವಿಸಿವೆ. ಮೊದಲನೆಯದಾಗಿ, ಕೆಲವು ಅರ್ಜಿದಾರರು ನಾಗರಿಕ ಸೇವಾ ಪೋರ್ಟಲ್ ಮೂಲಕ ಒಂದಕ್ಕಿಂತ ಹೆಚ್ಚು ಬಾರಿ ಫಾರ್ಮ್ 6 ಸಲ್ಲಿಸಿದ್ದಾರೆ. ಈ ಅರ್ಜಿಗಳನ್ನು ಪ್ರತ್ಯೇಕವಾಗಿ ಪರಿಶೀಲಿಸಿ ಪ್ರಕ್ರಿಯೆಗೊಳಿಸಿದ ಪರಿಣಾಮ, ಒಂದೇ ಮತದಾರರಿಗೆ ಅನೇಕ ಎಲೆಕ್ಟ್ರರ್ ಫೋಟೋ ಐಡೆಂಟಿಟಿ ಕಾರ್ಡ್ (EPIC) ಸಂಖ್ಯೆಗಳನ್ನು ನೀಡಲಾಗಿದೆ.

ಇದರಿಂದ ಒಬ್ಬ ವ್ಯಕ್ತಿಯ ಹೆಸರಿನಲ್ಲಿ ಒಂದಕ್ಕಿಂತ ಹೆಚ್ಚು ಮತದಾರರ ಗುರುತಿನ ಚೀಟಿಗಳು ಸೃಷ್ಟಿಯಾಗಿರುವುದು ಬೆಳಕಿಗೆ ಬಂದಿದೆ. ಮತದಾರರ ಪಟ್ಟಿಯಲ್ಲಿನ ನಕಲಿ ನೋಂದಣಿಗಳನ್ನು ತೆಗೆದುಹಾಕುವುದು SIR ಪ್ರಕ್ರಿಯೆಯ ಪ್ರಮುಖ ಉದ್ದೇಶವಾಗಿದ್ದರೂ, ಇಂತಹ ಲೋಪಗಳು ಹೇಗೆ ಸಂಭವಿಸಿದವು ಎಂಬ ಪ್ರಶ್ನೆ ಎದುರಾಗಿದೆ.

ಎರಡು ಕ್ಷೇತ್ರಗಳಲ್ಲಿ ಒಂದೇ ಮತದಾರರ ಹೆಸರು

ಎರಡನೇ ಲೋಪವು ಮತದಾರರು ತಮ್ಮ ವಾಸಸ್ಥಳವನ್ನು ಒಂದು ವಿಧಾನಸಭಾ ಕ್ಷೇತ್ರದಿಂದ ಮತ್ತೊಂದು ಕ್ಷೇತ್ರಕ್ಕೆ ಬದಲಾಯಿಸಿದ ಪ್ರಕರಣಗಳಿಗೆ ಸಂಬಂಧಿಸಿದೆ. ವಿಳಾಸ ಬದಲಾವಣೆಗೆ ಸಲ್ಲಿಸಿದ್ದ ಫಾರ್ಮ್ 8 ಅರ್ಜಿಗಳನ್ನು ಅನುಮೋದಿಸಿ ಹೊಸ ಕ್ಷೇತ್ರದ ಪಟ್ಟಿಗೆ ಹೆಸರು ಸೇರ್ಪಡೆ ಮಾಡಲಾಗಿತ್ತು. ಆದರೆ ಹಳೆಯ ಕ್ಷೇತ್ರದ ಮತದಾರರ ಪಟ್ಟಿಯಿಂದ ಹೆಸರು ತೆಗೆದುಹಾಕಲು ಸಲ್ಲಿಸಿದ್ದ ಫಾರ್ಮ್ 7 ಅರ್ಜಿಗಳು ಬಾಕಿ ಉಳಿದಿದ್ದವು. ಹೀಗಾಗಿ ಒಂದೇ ಮತದಾರರ ಹೆಸರು ಎರಡು ಕ್ಷೇತ್ರಗಳ ಪಟ್ಟಿಯಲ್ಲೂ ಕಾಣಿಸಿಕೊಂಡಿದೆ. ಈ ಪ್ರಕರಣಗಳನ್ನು ಪರಿಶೀಲಿಸಿ ಕಾನೂನುಬದ್ಧವಾಗಿ ತಿದ್ದುಪಡಿ ಕ್ರಮ ಕೈಗೊಳ್ಳಲು ಜಿಲ್ಲಾ ಚುನಾವಣಾಧಿಕಾರಿಗಳು ಹಾಗೂ ಮತದಾರರ ನೋಂದಣಾಧಿಕಾರಿಗಳಿಗೆ ವರ್ಗಾಯಿಸಲಾಗಿದೆ.

ಎಷ್ಟು ಮತದಾರರು ಈ ಲೋಪದಿಂದ ಪ್ರಭಾವಿತರಾಗಿದ್ದಾರೆ, ಎಷ್ಟು ನಕಲಿ ಹೆಸರುಗಳನ್ನು ತೆಗೆದುಹಾಕಬೇಕಿದೆ ಮತ್ತು ತಿದ್ದುಪಡಿ ಯಾವಾಗ ಪೂರ್ಣಗೊಳ್ಳಲಿದೆ ಎಂಬುದನ್ನು ಚುನಾವಣಾಧಿಕಾರಿ ಕಚೇರಿ ಸ್ಪಷ್ಟಪಡಿಸಿಲ್ಲ. ಅಂತಿಮ ಮತದಾರರ ಪಟ್ಟಿ ಪ್ರಕಟಣೆಗೆ ಮುನ್ನ ಜಾರಿಯಲ್ಲಿರುವ ಕಾನೂನುಬದ್ಧ ನಿರ್ಬಂಧದಿಂದ ತಿದ್ದುಪಡಿ ವಿಳಂಬವಾಗಿದೆ ಎಂದು ಕಚೇರಿ ತಿಳಿಸಿದೆ. ಈ ಬೆಳವಣಿಗೆ ಮತದಾರರ ಪಟ್ಟಿ ಪರಿಷ್ಕರಣೆಯ ಪಾರದರ್ಶಕತೆ ಹಾಗೂ ವಿಶ್ವಾಸಾರ್ಹತೆಯ ಕುರಿತು ಪ್ರಶ್ನೆಗಳು ಮೂಡುತ್ತಿವೆ.

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular