BIG BREAKING: ಸಿರಿಗೆರೆ ಸ್ವಾಮೀಜಿ ಪೀಠದಿಂದ ಕೆಳಗಿಳಿಸಲು ಶಾಮನೂರು ಶಿವಶಂಕರಪ್ಪ ನೇತೃತ್ವದ ಸಭೆಯಲ್ಲಿ ಮಹತ್ವದ ನಿರ್ಧಾರ

ದಾವಣಗೆರೆ: ಸಿರಿಗೆರೆ ಸ್ವಾಮೀಜಿಯವರನ್ನು ಪೀಠದಿಂದ ಕೆಳಗಿಳಿಸಲು ಶಾಮನೂರು ಶಿವಶಂಕರಪ್ಪ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ನಿರ್ಧಾರ ಕೈಗೊಳ್ಳಲಾಗಿದೆ.

ಸಿರಿಗೆರೆ ತರಳಬಾಳು ಮಠದ ಡಾ. ಶಿವಮೂರ್ತಿ ಸ್ವಾಮೀಜಿ ವಿರುದ್ಧ ಸ್ವಜಾತಿಯವರಿಂದಲೇ ಆಕ್ರೋಶ ವ್ಯಕ್ತವಾಗಿದೆ. ಶ್ರೀಗಳನ್ನು ಪೀಠದಿಂದ ಕೆಳಗಿಳಿಸಲು ಶಾಮನೂರು ಶಿವಶಂಕರಪ್ಪ ಅಧ್ಯಕ್ಷತೆಯಲ್ಲಿ ಸಮನ್ವಯ ಸಮಿತಿ ರಚಿಸಲಾಗಿದೆ.

ಆಗಸ್ಟ್ 18ರಂದು ತರಳಬಾಳು ಮಠಕ್ಕೆ ಹೋಗಲು ನಿರ್ಧಾರ ಕೈಗೊಳ್ಳಲಾಗಿದೆ. ದಾವಣಗೆರೆ ಹೊರವಲಯದ ಅಪೂರ್ವ ರೆಸಾರ್ಟ್ ನಲ್ಲಿ ನಡೆದ ಸಭೆಯಲ್ಲಿ ಮಾಜಿ ಸಚಿವರಾದ ಬಿ.ಸಿ. ಪಾಟೀಲ್, ರವೀಂದ್ರನಾಥ್, ಶಾಸಕ ಹರೀಶ್, ವಿಧಾನ ಪರಿಷತ್ ಸದಸ್ಯ ಎಸ್. ರುದ್ರೇಗೌಡ ಸೇರಿದಂತೆ ಪ್ರಮುಖರು ಭಾಗವಹಿಸಿದ್ದರು.

ಸಭೆಯಲ್ಲಿ ಸಿರಿಗೆರೆ ಸಿರಿಗೆರೆ ತರಳಬಾಳು ಗುರುಪೀಠದ ಡಾ. ಶಿವಮೂರ್ತಿ ಶಿವಾಚಾರ್ಯ ಸ್ವಾಮೀಜಿ ಪೀಠದಿಂದ ಕೆಳಗೆ ಸಮನ್ವಯ ಸಮಿತಿ ರಚನೆ ಮಾಡಲಾಗಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read