HomeKarnatakaSIR ವೇಳೆ ಸರ್ಕಾರಿ ಅಧಿಕಾರಿ ಮೇಲೆ ಹಲ್ಲೆ ಪ್ರಕರಣ: ಇಬ್ಬರು ಆರೋಪಿಗಳು ಅರೆಸ್ಟ್

SIR ವೇಳೆ ಸರ್ಕಾರಿ ಅಧಿಕಾರಿ ಮೇಲೆ ಹಲ್ಲೆ ಪ್ರಕರಣ: ಇಬ್ಬರು ಆರೋಪಿಗಳು ಅರೆಸ್ಟ್

ಬೆಂಗಳೂರು: ವಿಶೇಷ ತೀವ್ರ ಮತದಾರರ ಪಟ್ಟಿ ಪರಿಷ್ಕರಣೆ (Special Intensive Revision – SIR) ಕೆಲಸಕ್ಕೆ ತೆರಳಿದ್ದ ಸರ್ಕಾರಿ ಅಧಿಕಾರಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಬೆಂಗಳೂರು ಪೊಲೀಸರು

ಡಿ.ಜೆ.ಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಯಾರಬ್ ಮತ್ತು ದಸ್ತಗೀರ್ ಬಂಧಿತ ಆರೋಪಿಗಳು. ಬುಧವಾರ ಮಧ್ಯಾಹ್ನ ಸುಮಾರು 1:30 ರ ವೇಳೆಗೆ ಗ್ರೇಟರ್ ಬೆಂಗಳೂರು ಪ್ರಾಧಿಕಾರ (GBA) ಹಾಗೂ ಸ್ಲಂ ಡೆವಲಪ್‌ಮೆಂಟ್ ಬೋರ್ಡ್‌ನ ಅಧಿಕಾರಿಗಳ ತಂಡವು ಡಿ.ಜೆ. ಹಳ್ಳಿಯ ರೋಶನ್ ನಗರದಲ್ಲಿರುವ ಕೌಸರ್ ಮಸೀದಿ ಬಳಿ SIR ಸಮೀಕ್ಷಾ ಕಾರ್ಯಕ್ಕಾಗಿ ತೆರಳಿತ್ತು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಈ ವೇಳೆ ದಸ್ತಗೀರ್ ತನಗೂ SIR ಫಾರ್ಮ್ ನೀಡುವಂತೆ ಅಧಿಕಾರಿಗಳ ಬಳಿ ಪಟ್ಟು ಹಿಡಿದು ಗಲಾಟೆ ಆರಂಭಿಸಿದ್ದಾನೆ. ಆದರೆ ದಸ್ತಗೀರ್ ಈಗಾಗಲೇ ಜಯನಗರಕ್ಕೆ ವಾಸ್ತವ್ಯ ಬದಲಾಯಿಸಿರುವುದರಿಂದ ಆತನಿಗೆ ಫಾರ್ಮ್ ನೀಡಲು ಸಾಧ್ಯವಿಲ್ಲ ಎಂದು ಅಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ. ಇದರಿಂದ ಆಕ್ರೋಶಗೊಂಡ ಆರೋಪಿ ದಸ್ತಗೀರ್ ಹಾಗೂ ಆತನಿಗೆ ಸಾಥ್ ನೀಡಿದ ಯಾರಬ್ ಎಂಬಾತ ಕರ್ತವ್ಯನಿರತ ಅಧಿಕಾರಿಯ ಮುಖಕ್ಕೆ ಕೈಯಿಂದ ಹೊಡೆದಿದ್ದಾನೆ.

ಹಲ್ಲೆಯಿಂದಾಗಿ ಸ್ಲಂ ಡೆವಲಪ್‌ಮೆಂಟ್ ಬೋರ್ಡ್ ಸೂಪರಿಂಟೆಂಡೆಂಟ್ ಆಗಿ ಕಾರ್ಯನಿರ್ವಹಿಸುತ್ತಿರುವ ಫಕೀರಪ್ಪ ಗಂಭೀರ ಗಾಯಗೊಂಡಿದ್ದಾರೆ. ಅಧಿಕಾರಿಯ ತುಟಿಯಿಂದ ರಕ್ತ ಹರಿದಿದೆ. ಗಾಯಾಳು ಅಧಿಕಾರಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಈ ನಡುವೆ ಆರೋಪಿಗಳ ವಿರುದ್ಧ ಪ್ರಕರಣ ದಾಅಖಲಾಗಿದ್ದು, ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular