ದಾವಣಗೆರೆ: ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದಲ್ಲಿ ಪ್ರಚಾರದ ಭರಾಟೆ ಮುಗಿಲು ಮುಟ್ಟಿದೆ. ಘಟಾನುಘಟಿ ನಾಯಕರು ಅಬ್ಬರದ ಪ್ರಚಾರ ನಡೆಸಿದ್ದಾರೆ.
ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದಲ್ಲಿ ಅಣ್ಣನ ಪರವಾಗಿ ತಂಗಿ ಮತಯಾಚನೆ ಮಾಡಿದ್ದಾರೆ.
ಕಾಂಗ್ರೆಸ್ ಅಭ್ಯರ್ಥಿ ಸಮರ್ಥ್ ಶಾಮನೂರು ಅವರ ಪರವಾಗಿ ದಕ್ಷಿಣ ಕ್ಷೇತ್ರದಲ್ಲಿ ಸಮರ್ಥ್ ಅವರ ಸಹೋದರಿ ಡಾ. ಶ್ರೇಷ್ಠ ಶಾಮನೂರು ಅವರು ಮನೆಮನೆಗೆ ತೆರಳಿ ಕಾಂಗ್ರೆಸ್ ಗೆ ಮತಹಾಕುವಂತೆ ಮನವಿ ಮಾಡಿದರು.
ಕಾಲ್ನಡಿಗೆ ಮೂಲಕ ಮನೆಮನೆಗೆ ತೆರಳಿ ಕ್ರಮಸಂಖ್ಯೆ 3 ರ ಹಸ್ತದ ಗುರುತಿಗೆ ಮತಹಾಕುವಂತೆ ಮನವಿ ಮಾಡಿದರು. ಈ ಸಂದರ್ಭದಲ್ಲಿ ಪಕ್ಷದ ಮುಖಂಡರು, ಕಾರ್ಯಕರ್ತರು ಸಾಥ್ ನೀಡಿದ್ದಾರೆ.

