HomeLatest NewsSHOCKING: ಗ್ಯಾಸ್ ಗೀಸರ್ ಸೋರಿಕೆಯಾಗಿ ಸಹೋದರಿಯರು ಸಾವು

SHOCKING: ಗ್ಯಾಸ್ ಗೀಸರ್ ಸೋರಿಕೆಯಾಗಿ ಸಹೋದರಿಯರು ಸಾವು

ಮೈಸೂರು: ಸ್ನಾನ ಮಾಡುವ ವೇಳೆ ಗ್ಯಾಸ್ ಗೀಸರ್ ಸೋರಿಕೆಯಾಗಿ ಉಸಿರುಗಟ್ಟಿ ಅಕ್ಕ, ತಂಗಿ ಮೃತಪಟ್ಟ ಘಟನೆ ಪಿರಿಯಾಪಟ್ಟಣ ತಾಲೂಕಿನ ಬೆಟ್ಟದಪುರ ಗ್ರಾಮದಲ್ಲಿ ನಡೆದಿದೆ.

ಗುಲ್ಪಾರ್ಮ್(23), ಸಿಮ್ರಾನ್ ತಾಜ್(20) ಮೃತಪಟ್ಟವರು. ಅಕ್ಕ,ತಂಗಿಯರಾದ ಇಬ್ಬರೂ ಒಟ್ಟಿಗೆ ಸ್ನಾನಕ್ಕೆ ಹೋಗಿದ್ದು, ಬಹಳ ಹೊತ್ತಿನವರೆಗೂ ಹೊರಗೆ ಬಂದಿಲ್ಲ. ಅನುಮಾನಗೊಂಡ ಅವರ ತಂದೆ ಅಲ್ತಾಫ್ ಅವರು ಬಾಗಿಲು ಬಡಿದಿದ್ದಾರೆ. ಆಗ ಬಾಗಿಲು ತೆಗೆದಿಲ್ಲ. ಕೊನೆಗೆ ಬಾಗಿಲು ತೆಗೆದು ನೋಡಿದಾಗ ಮಕ್ಕಳಿಬ್ಬರೂ, ಅರೆಪ್ರಜ್ಞಾವಸ್ಥೆಯಲ್ಲಿರುವುದು ಕಂಡು ಬಂದಿದೆ. ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಆದರೆ, ಈ ವೇಳೆಗೆ ಇಬ್ಬರೂ ಮೃತಪಟ್ಟಿದ್ದಾರೆ ಎನ್ನಲಾಗಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular