HomeCrimeಆತ್ಮಹತ್ಯೆಗೆ ಯತ್ನಿಸಿದ ಅತ್ಯಾಚಾರ ಸಂತ್ರಸ್ತೆ; ಆರೋಪಿಗಳ ಪಟ್ಟಿಯಲ್ಲಿ ಬಿಜೆಪಿ ಮುಖಂಡನ ಪುತ್ರ !

ಆತ್ಮಹತ್ಯೆಗೆ ಯತ್ನಿಸಿದ ಅತ್ಯಾಚಾರ ಸಂತ್ರಸ್ತೆ; ಆರೋಪಿಗಳ ಪಟ್ಟಿಯಲ್ಲಿ ಬಿಜೆಪಿ ಮುಖಂಡನ ಪುತ್ರ !

ಮಧ್ಯಪ್ರದೇಶದ ದತಿಯಾ ಜಿಲ್ಲೆಯಲ್ಲಿ ಮಹಿಳೆಯ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿದ್ದು ಮಾತ್ರವಲ್ಲದೇ ಆಕೆಯ ಅಪ್ರಾಪ್ತ ಸಹೋದರಿಯ ಮೇಲೂ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣದ ನಾಲ್ವರು ಆರೋಪಿಗಳ ಪೈಕಿ ಓರ್ವ ಬಿಜೆಪಿ ನಾಯಕನ ಪುತ್ರ ಎಂದು ತಿಳಿದು ಬಂದಿದೆ, ಸಂತ್ರಸ್ತೆಯರ ಕುಟುಂಬಸ್ಥರು ಹಾಗೂ ಸ್ಥಳೀಯರು ಆರೋಪಿಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದ್ದಾರೆ. ಪೊಲೀಸ್ ಠಾಣೆಗೆ ಮುತ್ತಿಗೆ ಹಾಕಿ ಆಕ್ರೋಶ ಹೊರ ಹಾಕಿದ್ದಾರೆ.

ಇನ್ನು ಈ ಪ್ರಕರಣದಲ್ಲಿ ಪೊಲೀಸರು ಇಬ್ಬರನ್ನು ಬಂಧಿಸಿದ್ದಾರೆ. ಕೃತ್ಯ ನಡೆದ ಸ್ಥಳವು ಮಧ್ಯಪ್ರದೇಶ ಗೃಹ ಸಚಿವ ನರೋತ್ತಮ್​ ಮಿಶ್ರಾ ತವರು ಕ್ಷೇತ್ರವಾಗಿದೆ. ಮಿಶ್ರಾ ಢಾಟಿಯಾ ವಿಧಾನಸಭಾ ಕ್ಷೇತ್ರದ ಶಾಸಕರಾಗಿದ್ದಾರೆ. ಸಂತ್ರಸ್ತರಲ್ಲಿ ಒಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಕೂಡಲೇ ಆಕೆಯನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಆಕೆ ಚಿಕಿತ್ಸೆ ಪಡೆಯುತ್ತಿದ್ದಾರೆ.

ಸಂತ್ರಸ್ತೆಯರು ಹಾಗೂ ಆರೋಪಿಗಳು ವಿದ್ಯಾರ್ಥಿಗಳಾಗಿದ್ದು ಪೊಲೀಸರು ಈ ಸಂಬಂಧ ತನಿಖೆ ನಡೆಸುತ್ತಿದ್ದಾರೆ ಎಂದು ದಾತಿಯಾ ಪೊಲೀಸ್​ ವರಿಷ್ಠಾಧಿಕಾರಿ ಪ್ರದೀಪ್​ ಶರ್ಮಾ ತಿಳಿಸಿದ್ದಾರೆ. ಆರೋಪಿಗಳ ವಿರುದ್ಧ ಭಾರತೀಯ ದಂಡ ಸಂಹಿತೆಯ ವಿವಿಧ ಸೆಕ್ಷನ್​ಗಳು ಹಾಗೂ ಪೋಕ್ಸೋ ಕಾಯ್ದೆಯ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular