ದುಡುಕಿನ ನಿರ್ಧಾರ ಕೈಗೊಂಡು ಮೂವರು ಸಹೋದರಿಯರು ಆತ್ಮಹತ್ಯೆ

ತುಮಕೂರು: ತುಮಕೂರು ಜಿಲ್ಲೆ, ಚಿಕ್ಕನಾಯಕನಹಳ್ಳಿ ತಾಲೂಕಿನ ಬರಕನಹಾಲ್ ತಾಂಡಾ ಬಳಿ ಮೂವರು ಅನಾಥ ಸಹೋದರಿಯರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಸೋದರಿಯರಾದ ರಂಜಿತಾ(24),ಬಿಂದು(21), ಚಂದನಾ(18) ಆತ್ಮಹತ್ಯೆ ಮಾಡಿಕೊಂಡವರು ಎಂದು ಹೇಳಲಾಗಿದೆ. ಹಲವು ವರ್ಷಗಳ ಹಿಂದೆಯೇ ಈ ಸಹೋದರಿಯರ ಪೋಷಕರು ಮೃತಪಟ್ಟಿದ್ದರು. ಅಂದಿನಿಂದ ಇವರು ಅಜ್ಜಿಯ ಜೊತೆಯಲ್ಲಿ ವಾಸವಾಗಿದ್ದರು. ಇತ್ತೀಚೆಗೆ ಅಜ್ಜಿ ನಿಧನದ ನಂತರ ಮಾನಸಿಕ ಖಿನ್ನತೆಗೆ ಒಳಗಾಗಿದ್ದರು ಎನ್ನಲಾಗಿದೆ.

2 -3 ದಿನದ ಹಿಂದೆಯೇ ಇವರು ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದ್ದು, ವಿಷಯ ತಡವಾಗಿ ಬೆಳಕಿಗೆ ಬಂದಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read