HomeLatest NewsBIG NEWS: ಧರ್ಮಸ್ಥಳ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್: SITಯಿಂದ ಇಬ್ಬರು ಆಂಬುಲೆನ್ಸ್ ಚಾಲಕರ ವಿಚಾರಣೆ

BIG NEWS: ಧರ್ಮಸ್ಥಳ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್: SITಯಿಂದ ಇಬ್ಬರು ಆಂಬುಲೆನ್ಸ್ ಚಾಲಕರ ವಿಚಾರಣೆ

ಮಂಗಳೂರು: ಧರ್ಮಸ್ಥಳದ ವಿವಿಧೆಡೆ ಶವಗಳನ್ನು ಹೂತಿಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್ ಐಟಿ ಅಧಿಕಾರಿಗಳು ಇಬ್ಬರು ಆಂಬುಲೆನ್ಸ್ ಚಾಲಕರ ವಿಚಾರಣೆ ನಡೆಸಿದ್ದಾರೆ.

ಕಳೆದ 23 ವರ್ಷಗಳಿಮ್ದ ಶವ ಸಾಗಾಟ ಮಾಡುತ್ತಿದ್ದ ಇಬ್ಬರನ್ನೂ ವಿಚಾರಣೆ ನಡೆಸಿದ ಎಸ್ ಐಟಿ ಮಹತ್ವದ ಮಾಹಿತಿ ಸಂಗ್ರಹಿಸಿ ಹೇಳಿಕೆ ದಾಖಲಿಸಿಕೊಂಡಿದೆ.

ಆರೋಪಿ ಚಿನ್ನಯ್ಯ ಹೇಳಿಕೆ ಬಳಿಕ ಬೆಳ್ತಂಗಡಿಯ ಇಬ್ಬರು ಆಂಬುಲೆನ್ಸ್ ಚಾಲಕರನ್ನು ಎಸ್ ಐಟಿ ವಿಚಾರಣೆ ನಡೆಸಿದೆ. ಬೆಳ್ತಂಗಡಿಯ ಜಲಿಲ್ ಬಾಬಾ ಹಾಗೂ ಹಮೀದ್ ಯುಡಿಆರ್ ಎಂಬುವವರಿಗೆ ನೋಟಿಸ್ ನೀಡಿ ವಿಚಾರಣೆ ನಡೆಸಲಾಗಿದೆ ಎಂದು ತಿಳಿದುಬಂದಿದೆ. ಸ್ಥಳೀಯ ಪೊಲೀಸರ ನಿರ್ದೇಶನದಂತೆ ಶವ ಸಾಗಾಟ ಮಾಡಲಾಗಿದೆ ಎಂದು ವಿಚಾರಣೆ ವೇಳೆ ಹೇಳಿಕೆ ನೀಡಿದ್ದಾರೆ ಎಂದು ತಿಳಿದುಬಂದಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular