HomeLatest NewsBREAKING : ಧರ್ಮಸ್ಥಳದಲ್ಲಿ 'ಅಸ್ಥಿಪಂಜರ'  ಸಿಕ್ಕ ಬೆನ್ನಲ್ಲೇ   'SIT' ತನಿಖೆ ಚುರುಕು  : ಶವಗಳ ದಫನ್...

BREAKING : ಧರ್ಮಸ್ಥಳದಲ್ಲಿ ‘ಅಸ್ಥಿಪಂಜರ’  ಸಿಕ್ಕ ಬೆನ್ನಲ್ಲೇ   ‘SIT’ ತನಿಖೆ ಚುರುಕು  : ಶವಗಳ ದಫನ್ ಆದ ದಾಖಲೆಗಳ ಸಂಗ್ರಹ.!

ಧರ್ಮಸ್ಥಳ : ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್ ಐ ಟಿ ತನಿಖೆ ಚುರುರಾಗಿದ್ದು, ಎಸ್ ಐ ಟಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಾದ ಶವಗಳ ದಫನ್ ಆದ ದಾಖಲೆ ಸಂಗ್ರಹಿಸುತ್ತಿದೆ. ಧರ್ಮಸ್ಥಳ, ಬೆಳ್ತಂಗಡಿ ಪೊಲೀಸ್ ಠಾಣೆಗಳ ಯುಡಿಆರ್ ವಶಕ್ಕೆ ಪಡೆದುಕೊಂಡಿದೆ.

ಧರ್ಮಸ್ಥಳ ಕೇಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಅಸ್ಥಿಪಂಜರ ಸಿಕ್ಕ ಬೆನ್ನಲ್ಲೇ ಇದರ ರಹಸ್ಯ ಭೇದಿಸಲು ಎಸ್ ಐ ಟಿ ಪಣ ತೊಟ್ಟಿದೆ. ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಾದ ಶವಗಳ ದಫನ್ ಆದ ದಾಖಲೆ ಸಂಗ್ರಹಿಸುತ್ತಿದೆ. ಹಾಗೂ ಎಸ್ ಐ ಟಿ ಧರ್ಮಸ್ಥಳ, ಬೆಳ್ತಂಗಡಿ ಪೊಲೀಸ್ ಠಾಣೆಗಳ ಯುಡಿಆರ್ ವಶಕ್ಕೆ ಪಡೆದುಕೊಂಡು ತನಿಖೆ ನಡೆಸುತ್ತಿದೆ.

ಧರ್ಮಸ್ಥಳದಲ್ಲಿ ನೇತ್ರಾವತಿ ನದಿ ತೀರದಲ್ಲಿ ನೂರಾರು ಶವಗಳನ್ನು ಹೂತಿಟ್ಟ ಪ್ರಕರಣಕ್ಕೆ ಸಂಬಂಧ ತನಿಖೆ ನಡೆಸುತ್ತಿರುವ ಎಸ್ ಐಟಿ ಅಧಿಕಾರಿಗಳ ತಂಡ 8ನೇ ಪಾಯಿಂಟ್ ನಲ್ಲಿ ಶೋಧಕಾರ್ಯವನ್ನು ಮುಕ್ತಾಯಗೊಳಿಸಿದೆ.
ನೂರಾರು ಶವಗಳನ್ನು ಹೂತಿಟ್ಟಿರುವುದಾಗಿ ದೂರುದಾರ ಒಟ್ಟು 13 ಸ್ಥಳಗಳ ಬಗ್ಗೆ ಹೇಳಿಕೆ ನೀಡಿದ್ದು, ಈ ಹಿನ್ನೆಲೆಯಲ್ಲಿ ಎಸ್ ಐಟಿ ಅಧಿಕಾರಿಗಳು ಅಸ್ಥಿಪಂಜರಗಳಿಗಾಗಿ ಒಂದೊಂದೇ ಸ್ಥಳಗಳಲ್ಲಿ ಶೋಧ ಕಾರ್ಯ ನಡೆಸಿದ್ದಾರೆ. ಈಗಾಗಲೇ 7 ಸ್ಥಳಗಳಲ್ಲಿ ಮಣ್ಣು ಅಗೆದು ಅಸ್ಥಿಪಂಜರಗಳಿಗಾಗಿ ಶೋಧ ನಡೆಸಲಾಗಿದೆ. 6ನೇ ಪಾಯಿಂಟ್ ನಲ್ಲಿ ಮಾತ್ರ ಇಡಿದಾದ ಅಸ್ಥಿಪಂಜರ ಪತ್ತೆಯಾಗಿದೆ. ನಿನ್ನೆ 7ನೇ ಪಾಯಿಂಟ್ ನಲ್ಲಿ ಅಧಿಕಾರಿಗಳು ಶೋಧಕಾರ್ಯ ನಡೆಸಿದ್ದು, ಈ ವೇಳೆ ಕರವಸ್ತ್ರವೊಂದು ಪತ್ತೆಯಾಗಿದೆ ಎಂದು ತಿಳಿದುಬಂದಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

7ನೇ ಸ್ಥಳದಲ್ಲಿ ಶೋಧಕಾರ್ಯ ಮುಕ್ತಾಯಗೊಂಡ ಬಳಿಕ 8ನೇ ಪಾಯಿಂಟ್ ನಲ್ಲಿ ಮಿನಿ ಅರ್ಥ್ ಮೂವರ್ ಬಳಸಿ ಅಸ್ಥಿಪಂಜರಕ್ಕಾಗಿ ಶೋಧ ನಡೆಸಲಾಗಿದೆ. ಮಣ್ಣು ಅಗೆದರೂ ಯಾವುದೇ ಅಸ್ಥಿಪಂಜರದ ಅವಶೇಷಗಳು ಪತ್ತೆಯಾಗಿಲ್ಲ. ಈ ಹಿನ್ನೆಲೆಯಲ್ಲಿ 8ನೇ ಪಾಯಿಂಟ್ ನಲ್ಲಿ ಶೋಧಕಾರ್ಯಾಚರಣೆ ಮುಕ್ತಾಯಗೊಂಡಿದೆ ಎಂದು ತಿಳಿದುಬಂದಿದೆ. ಶೋಧ ಕಾರ್ಯಾಚರಣೆ ವೇಳೆ ಸ್ಥಳದ ಸುತ್ತ ಕವರ್ ಮಾಡಿ ಗೌಪ್ಯತೆ ಕಾಪಾಡಿಕೊಂಡು ಶೋಧ ನಡೆಸಲಾಗಿದೆ.

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular