HomeKarnatakaನಕಲಿ ಔಷಧ ಮಾರಾಟ ಜಾಲ ಪತ್ತೆ ಪ್ರಕರಣ ತನಿಖೆಗೆ ಎಸ್ಐಟಿ ರಚನೆ: ಸರ್ಕಾರ ಆದೇಶ

ನಕಲಿ ಔಷಧ ಮಾರಾಟ ಜಾಲ ಪತ್ತೆ ಪ್ರಕರಣ ತನಿಖೆಗೆ ಎಸ್ಐಟಿ ರಚನೆ: ಸರ್ಕಾರ ಆದೇಶ

ಬೆಂಗಳೂರು: ರಾಜ್ಯದಲ್ಲಿ ನಕಲಿ ಔಷಧ ಮಾರಾಟ ಜಾಲ ಪತ್ತೆಗೆ ವಂಶಿಕೃಷ್ಣ ಸಾರಥ್ಯದಲ್ಲಿ 6 ಜನರ ಎಸ್‌ಐಟಿ ರಚಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ಬಿಡದಿ ಬಳಿ 5 ಕೋಟಿ ರೂ. ಮೌಲ್ಯದ ನಕಲಿ ಔಷಧ ಸಿಕ್ಕ ಬೆನ್ನಲ್ಲೇ ಕಠಿಣ ಕ್ರಮ ಕೈಗೊಳ್ಳಲಾಗಿದ್ದು, ನಕಲಿ ಔಷಧಿ ಮಾರಾಟ ಜಾಲ ಪತ್ತೆ ಪ್ರಕರಣದ ತನಿಖೆಗೆ ಬೆಂಗಳೂರು ನಗರ ಜಂಟಿ ಪೊಲೀಸ್ ಆಯುಕ್ತ(ಪಶ್ಚಿಮ) ಸಿ.ವಂಶಿಕೃಷ್ಣ ಸಾರಥ್ಯದಲ್ಲಿ ‘ವಿಶೇಷ ತನಿಖಾ ತಂಡ(ಎಸ್ಐಟಿ)’ವನ್ನು ರಚಿಸಿ ರಾಜ್ಯ ಸರ್ಕಾರ ಗುರುವಾರ ಆದೇಶಿಸಿದೆ.

ನಕಲಿ ಔಷಧ ದಂಧೆಕೋರರ ವಿರುದ್ಧದ ರಚಿಸಲಾದ ಎಸ್ಐಟಿಗೆ ಸಿ.ವಂಶಕೃಷ್ಣ ಅವರು ಮುಖ್ಯಸ್ಥರಾಗಿದ್ದು, ಎಸ್ಪಿ ಶಿವಪ್ರಕಾಶ್ ದೇವರಾಜು, ಸಿಐಡಿ ಎಸ್ಪಿ ಲೋಕೇಶ್ .ಬಿ.ಜಗಲಾಸರ್, ಸಹಾಯಕ ಔಷಧ ನಿಯಂತ್ರಕರಾದ ಮಂಜುನಾಥ್ ರೆಡ್ಡಿ, ನಮ್ರತಾ ಹಲ್ಲೂರು ಹಾಗೂ ಔಷಧ ನಿರೀಕ್ಷಕಿ ನೇಹಾ ಮುರ್ಗಿ ಸದಸ್ಯರಾಗಿದ್ದಾರೆ. ಈ ಎಸ್‌ಐಟಿಗೆ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕರು (ಕಾನೂನು ಮತ್ತು ಸುವ್ಯವಸ್ಥೆ) ಮೇಲುಸ್ತುವಾರಿ ವಹಿಸಲಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಮೂರು ದಿನಗಳ ಹಿಂದೆ ಬೆಂಗಳೂರು ದಕ್ಷಿಣ ಜಿಲ್ಲೆ ಬಿಡದಿ ಸಮೀಪ ಪ್ರತಿಷ್ಠಿತ ಕಂಪನಿಗಳ ಹೆಸರಿನಲ್ಲಿ ನಕಲಿ ಔಷಧಗಳಿಗೆ ಲೇಬಲ್ ಅಂಟಿಸಿ ಮಾರಾಟ ಮಾಡುತ್ತಿದ್ದ ಘಟಕದ ಮೇಲೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಅಧಿಕಾರಿಗಳು ಹಾಗೂ ಪೊಲೀಸರು ಜಂಟಿ ಕಾರ್ಯಾಚರಣೆ ನಡೆಸಿದ್ದರು. ಈ ದಾಳಿ ವೇಳೆ 4.91 ಕೋಟಿ ರು ಮೌಲ್ಯದ ನಕಲಿ ಔಷಧಿಗಳು ಜಪ್ತಿಯಾ ಗಿತ್ತು. ಈ ಸಂಬಂಧ ನಾಲ್ವರನ್ನು ಪೊಲೀ ಸರು ಬಂಧಿಸಿದ್ದು, ತಾವರೆಕೆರೆ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

 

ಈ ನಕಲಿ ಔಷಧಿ ಮಾರಾಟ ಜಾಲ ಪತ್ತೆ ಕೃತ್ಯವನ್ನು ಗಂಭೀರವಾಗಿ ಪರಿಗಣಿಸಿದ ಸರ್ಕಾರವು, ಆ ಜಾಲವನ್ನು ಬುಡ ಸಹಿತ ಜಾಲಾಡಲು ಎಐಟಿ ರಚಿಸಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

Most Popular