ದಕ್ಷಿಣ ಕನ್ನಡ : ಧರ್ಮಸ್ಥಳದಲ್ಲಿ ಶವಗಳನ್ನು ಹೂತಿಟ್ಟ ಪ್ರಕರಣದ ತನಿಖೆಯನ್ನ ಎಸ್ ಐ ಟಿ ನಡೆಸುತ್ತಿದ್ದು, ಬೆಳ್ತಂಗಡಿಯಲ್ಲೇ ಎಸ್ ಐ ಟಿ ಕಚೇರಿ ಓಪನ್ ಮಾಡಲಿದೆ.
ಪ್ರಕರಣದ ತನಿಖೆ ನಡೆಸಲು ಇಂದು ಎಸ್ ಐ ಟಿ ಅಧಿಕಾರಿಗಳ ತಂಡ ಧರ್ಮಸ್ಥಳಕ್ಕೆ ತೆರಳುವ ನಿರೀಕ್ಷೆಯಿದ್ದು, ತಂಡವು ಬೆಳ್ತಂಗಡಿಯಲ್ಲಿ SIT ಕಚೇರಿ ತೆರೆಯಲಿದೆ ಎನ್ನಲಾಗಿದೆ. ಬೆಳ್ತಂಗಡಿ ಪೊಲೀಸ್ ಠಾಣೆ ಬಳಿ ನೂತನವಾಗಿ ನಿರ್ಮಿಸಿರುವ ಪೊಲೀಸ್ ಕ್ವಾಟ್ರಸ್ ನಲ್ಲಿ ಎಸ್ ಐ ಟಿ (SIT) ಕಚೇರಿ ಆರಂಭಿಸಲಿದೆ.
ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷ ಪತ್ರದಲ್ಲಿ ಪ್ರಸ್ತಾಪಿಸಿರುವ ಅಂಶಗಳು ಹಾಗೂ ದಕ್ಷಿಣ ಕನ್ನಡ ಜಿಲ್ಲೆ, ಧರ್ಮಸ್ಥಳ ಪೊಲೀಸ್ ಠಾಣೆ ಮೊ.ಸಂ. 39/2025 ಕಲಂ 211(ಎ), ಬಿ.ಎನ್.ಎಸ್. ಪ್ರಕರಣಕ್ಕೆ ಸಂಬಂಧಿಸಿದಂತೆ ಸಮಗ್ರ ತನಿಖೆಯನ್ನು ಕೈಗೊಳ್ಳಲು ಒಂದು ವಿಶೇಷ ತನಿಖಾ ತಂಡ (Special Investigation Team)ವನ್ನು ರಚಿಸುವುದು ಸೂಕ್ತವೆಂದು ಸರ್ಕಾರವು ತೀರ್ಮಾನಿಸಿ ಸರ್ಕಾರ ಎಸ್ಐಟಿ ರಚಿಸಿ ಆದೇಶಿಸಿದೆ.
You Might Also Like
TAGGED:ಧರ್ಮಸ್ಥಳ