ಕಲಬುರಗಿ: ಆಳಂದ ಕ್ಷೇತ್ರದಲ್ಲಿ ಮತಗಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ಆರಂಭಿಸಿರುವ ಸಿಐಡಿ ಎಸ್ ಐಟಿ ಅಧಿಕಾರಿಗಳು ಬಿಜೆಪಿ ಮಾಜಿ ಶಾಸಕ ಸುಭಾಷ್ ಗುತ್ತೇದಾರ್ ಅವರ ಮನೆ ಮೇಲೆ ದಾಳಿ ನಡೆಸಿದ್ದಾರೆ.
ಕಲಬುರಗಿ ನಗರದಲ್ಲಿರುವ ಸುಭಾಷ್ ಗುತ್ತೇದಾರ್ ಹಾಗೂ ಅವರ ಮಗನ ಮನೆಗಳ ಮೇಲೆ ದಾಳಿ ನಡೆಸಿ ಅಧಿಕಾರಿಗಳು ಪರಿಶೀಲನೆ ನಡೆಸಿದ್ದಾರೆ. ಕಲಬುರಗಿ ನಗರ 3-4 ಕಡೆಗಳಲ್ಲಿ ದಾಳಿ ನಡೆಸಲಾಗಿದೆ.
ಪೊಲೀಸ್ ಬಿಗಿ ಭದ್ರತೆಯಲ್ಲಿ ಎಸ್ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದು, ದಾಖಲೆಗಳ ಪರಿಶೀಲನೆ ನಡೆಸಿದ್ದಾರೆ.