HomeKarnatakaಸೌಜನ್ಯ ಅತ್ಯಾಚಾರ, ಕೊಲೆಪ್ರಕರಣ: SIT ಸಭೆಯಲ್ಲಿ ಮಹತ್ವದ ನಿರ್ಧಾರ: ತನಿಖಾಧಿಕಾರಿಯಾಗಿ ಹಿರಿಯ ಐಪಿಎಸ್ ಅಧಿಕಾರಿ...

ಸೌಜನ್ಯ ಅತ್ಯಾಚಾರ, ಕೊಲೆಪ್ರಕರಣ: SIT ಸಭೆಯಲ್ಲಿ ಮಹತ್ವದ ನಿರ್ಧಾರ: ತನಿಖಾಧಿಕಾರಿಯಾಗಿ ಹಿರಿಯ ಐಪಿಎಸ್ ಅಧಿಕಾರಿ ನೇಮಕ

ಮಂಗಳೂರು: ಧರ್ಮಸ್ಥಳದ ಸೌಜನ್ಯ ಅತ್ಯಾಚಾರ ಹಾಗೂ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಸೂಚನೆ ಮೇರೆಗೆ ಎಸ್ ಐಟಿ ತಂಡ ರಚನೆಯಾಗಿದ್ದು, ಮರು ತನಿಖೆ ಕೈಗೊಂಡಿದೆ. ಈ ನಡುವೆ ಎಸ್‌ಐಟಿ ಸಭೆಯಲ್ಲಿ ಮಹತ್ವದ ನಿರ್ಧಾರ ಕೈಗೊಳ್ಳಲಾಗಿದೆ. ಪ್ರಕರಣದ ತನಿಖಾಧಿಕಾರಿಯಾಗಿ ಓರ್ವ ಹಿರಿಯ ಐಪಿಎಸ್ ಅಧಿಕಾರಿ ನೇಮಕ ಮಾಡಲಾಗಿದೆ.

ಐಪಿಎಸ್ ಅಧಿಕಾರಿ ಲೋಕೇಶ್ ಬಿ ಜಗಲಾಸರ್ ಅವರನ್ನು ಪ್ರಕರಣದ ತನಿಖಾ ಅಧಿಕಾರಿಯಾಗಿ ಎಸ್‌ಐಟಿ ಮುಖ್ಯಸ್ಥ ಎನ್.ಶಶಿಕುಮಾರ್ ನೇಮಿಸಿದ್ದಾರೆ. ಪ್ರಕರಣದ ತೀವ್ರತೆ, ಗಂಭೀರತೆ ಅರಿತು ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ತನಿಖಾ ಅಧಿಕಾರಿಗೆ ಸಹಾಯಕ ತನಿಖಾ ಅಧಿಕಾರಿಯಾಗಿ ಎಸಿಪಿ ಮನೋಜ್ ಕುಮಾರ್ ನಾಯ್ಕ್ ನೇಮಕಗೊಂಡಿದ್ದಾರೆ. ಒರ್ವ ಐಪಿಎಸ್ ಹಾಗೂ ಓರ್ವ ಕೆಎಸ್‌ಪಿಎಸ್ ಅಧಿಕಾರಿಗಳಿಂದ ತನಿಖೆ ನಡೆಯಲಿದೆ.

ಲೋಕೇಶ್ ಬಿ ಜಗಲಾಸರ್ ಈ ಹಿಂದೆ ಬಾಗಲಕೋಟೆ ಹಾಗೂ ಧಾರವಾಡದಲ್ಲಿ ಎಸ್‌ಪಿಯಾಗಿ, ಬೆಂಗಳೂರು ನಗರದಲ್ಲಿ ಡಿಸಿಪಿಯಾಗಿ ಕೆಲಸ ಮಾಡಿದ್ದರು. ಪ್ರಸ್ತುತ ಸಿಐಡಿಯಲ್ಲಿ ಎಸ್‌ಪಿಯಾಗಿ ಕೆಲಸ ನಿರ್ವಹಿಸುತ್ತಿದ್ದಾರೆ.

SIT ಮರು ತನಿಖೆ ಆರಂಭ

14 ವರ್ಷಗಳ ಹಿಂದೆ ಧರ್ಮಸ್ಥಳದಲ್ಲಿ ನಡೆದ ಸೌಜನ್ಯಾ ಅತ್ಯಾಚಾರ ಹಾಗೂ ಕೊಲೆ ಪ್ರಕರಣದ ಮರು ತನಿಖೆಗೆ ಸುಪ್ರೀಂ ಕೋರ್ಟ್ ಆದೇಶ ನೀಡಿದ್ದು, ಎಸ್ ಐಟಿ ತಂಡ ಇಂದಿನಿಂದ ತನಿಖೆ ಆರಂಭಿಸಲಿದೆ.

ಪ್ರಕರಣದ ಮರು ತನಿಖೆ ಹಿನ್ನೆಲೆಯಲ್ಲಿ ಎಸ್ಐಟಿ ತನಿಖಾ ದಳದ ಮುಖ್ಯಸ್ಥರಾಗಿರುವ ಐಪಿಎಸ್ ಅಧಿಕಾರಿ ಎನ್. ಶಶಿಕುಮಾರ್ ನೇತೃತ್ವದ ಎಸ್ ಐಟಿ ಅಧಿಕಾಅರಿಗಳ ತಂಡ ಮಂಗಳೂರಿಗೆ ಭೇಟಿ ನೀಡಿದೆ. ಮಂಗಳೂರು ಪೊಲೀಸ್ ಆಯುಕ್ತ ಸುಧೀರ್ ರೆಡ್ಡಿ ಅವರನ್ನು ಭೇತಿಯಾಗಿ ಚರ್ಚೆ ನಡೆಸಿದೆ.

17 ವರ್ಷದ ಸೌಜನ್ಯ ಮೇಲಿನ ಅತ್ಯಾಚಾರ ಮತ್ತು ಕೊಲೆ ಪ್ರಕರಣವು 2012ರಲ್ಲಿ ಧರ್ಮಸ್ಥಳದ ಬಳಿ ನಡೆದಿತ್ತು. ಈ ಪ್ರಕರಣದಲ್ಲಿ ಬಂಧಿತನಾಗಿದ್ದ ಸಂತೋಷ್ ರಾವ್ ಎಂಬಾತನನ್ನು 2023ರ ಜೂನ್ 16ರಂದು ಸಿಬಿಐ ವಿಶೇಷ ನ್ಯಾಯಾಲಯವು ದೋಷಮುಕ್ತಗೊಳಿಸಿತ್ತು. ಹಿಂದಿನ ಸಿಐಡಿ ಹಾಗೂ ಸಿಬಿಐ ತನಿಖೆಯ ಬಗ್ಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿರುವ ಸುಪ್ರೀಂ ಕೋರ್ಟ್, ಮರುತನಿಖೆಗಾಗಿ ಎಸ್‌ಐಟಿ (SIT) ರಚಿಸುವಂತೆ ನಿರ್ದೇಶಿಸಿತ್ತು. ಅಲ್ಲದೇ ತನಿಖಾ ತಂಡ 3 ತಿಂಗಳೊಳಗಾಗಿ ತನಿಖೆ ಪೂರ್ಣಗೊಳಿಸಲು ಸುಪ್ರೀಂ ಕೋರ್ಟ್ ಸೂಚಿಸಿತ್ತು.

ಈ ಹಿನ್ನೆಲೆಯಲ್ಲಿ ಪ್ರಕರಣದ ಮರು ತನಿಖೆಗೆ ರಾಜ್ಯ ಸರ್ಕಾರ ಎಸ್ ಐಟಿ ರಚಿಸಿದ್ದು, ಎಸ್‌ಐಟಿ ತಂಡಕ್ಕೆ 16 ಮಂದಿಯನ್ನು ತನಿಖಾ ಸಹಾಯಕರಾಗಿ ನೇಮಕ ಮಾಡಿ ಆದೇಶಿಸಿದೆ. ಐದು ಮಂದಿ ಅಧಿಕಾರಿಗಳು ಹಾಗೂ , 16 ಮಂದಿ ತನಿಖಾ ಸಹಾಯಕ ಸಿಬ್ಬಂದಿಗಳಾಗಿ ನೇಮಕ ಮಾಡಲಾಗಿದೆ.

ಎಸ್ ಐಟಿ ತನಿಖಾ ದಳದ ಮುಖ್ಯಸ್ಥರಾಗಿ ಐಪಿಎಸ್ ಎನ್ ಶಶಿಕುಮಾರ್ ಪೋಲೀಸ್, ಮಹಾನಿರೀಕ್ಷಕರು ಹಾಗೂ ಸದಸ್ಯರಾಗಿ, ಮಂಗಳೂರು ನಗರ ಪೊಲೀಸ್ ಆಯುಕ್ತರಾದ ಸಿ ಎಚ್ ಸುಧೀರ್ ಕುಮಾರ್ ರೆಡ್ಡಿ ಬೆಂಗಳೂರು ರಾಜ್ಯ ಗುಪ್ತ ವಾರ್ತೆ ಯ ನಿಶಾ ಜೇಮ್ಸ್, ಬೆಂಗಳೂರು ಸಿಐಡಿ ಪೊಲೀಸ್ ಅಧೀಕ್ಷಕರಾದ ಲೋಕೇಶ್ ಜಗಲಸಾರ್ , ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೆಚ್ಚುವರಿ ಪೊಲೀಸ್ ಅಧಿಕ್ಷಕರಾದ ವೆಂಕಟೇಶ್ ಪ್ರಸನ್ನ ಅವರನ್ನು ನೇಮಕ ಮಾಡಲಾಗಿದೆ.

ಎಸ್ಐಟಿ ತನಿಖಾ ಸಹಾಯಕರಾಗಿ ಮಂಗಳೂರು ನಗರ ಸಿಸಿಬಿಯ ಎಸಿಪಿ ಮನೋಜ್ ಕುಮಾರ್ ನಾಯಕ್, ಬೆಂಗಳೂರು ಸಿಸಿಬಿ ಎಸಿಪಿ ರಾಮಚಂದ್ರ.ಬಿ, ಸಿ ಐ ಡಿ ಇನ್ಸ್ಪೆಕ್ಟರ್ ದೀಪಕ್, ಇನ್ಸ್ಪೆಕ್ಟರ್ ಮೋಹನ್ ಡಿ ಪಾಟೀಲ್, ಮಡಿವಾಳ ಸಂಚಾರ ಪೊಲೀಸ್ ಠಾಣೆ ಇನ್ಸ್ಪೆಕ್ಟರ್ ಈಶ್ವರಿ, ಕೊಣಾಜೆ ಪೊಲೀಸ್ ಠಾಣೆಯ ಪಿಎಸ್ಐ ಪುನೀತ್ ಗಾವಂಕರ್, ದಕ್ಷಿಣ ಸಂಚಾರಿ ಪೊಲೀಸ್ ಠಾಣೆಯ ಪಿಎಸ್ಐ ಪ್ರದೀಪ್ , ಕಂಕನಾಡಿ ಪೊಲೀಸ್ ಠಾಣೆಯ ಪಿಎಸ್ಐ ಅನಿತಾ ನಿಕಂ, ಮಂಗಳೂರು ಸಿಸಿಬಿ ಎ ಎಸ್ ಐ ಮೋಹನ್, ಕಂಕನಾಡಿ ಪೊಲೀಸ್ ಠಾಣೆಯ ಸಿಬ್ಬಂದಿ ಪ್ರದೀಪ್ ಕುಮಾರ್ ರೈ, ಗೋವರ್ಧನ್, ದಿನೇಶ್ ಏನ್, ಉಲ್ಲಾಳ ಪೊಲೀಸ್ ಠಾಣೆಯ ಸಿಬ್ಬಂದಿ ರಾಧಾಕೃಷ್ಣ ಕೆಕೆ, ಕಾವೂರು ಪೊಲೀಸ್ ಠಾಣೆಯ ಸಿಬ್ಬಂದಿ ರೆಜಿ.ವಿ.ಎಂ, ಸುರತ್ಕಲ್ ಪೊಲೀಸ್ ಠಾಣೆಯ ಸಿಬ್ಬಂದಿ ರಾಜೇಂದ್ರ ಪ್ರಸಾದ್ ವಿಪಿ, ಕಂಕನಾಡಿ ಪೊಲೀಸ್ ಠಾಣೆ ಮಹಿಳಾ ಸಿಬ್ಬಂದಿ ಪ್ರಮೀಳ ಅವರನ್ನು ಒಳಗೊಂಡ ತನಿಖಾ ತಂಡವನ್ನು ರಚನೆ ಮಾಡಲಾಗಿದೆ.

ಸೌಜನ್ಯ ಅತ್ಯಾಚಾರ, ಕೊಲೆ ನಡೆದು 14 ವರ್ಷಗಳ ಬಳಿಕ ಮರುತನಿಖೆ ನಡೆಯುತ್ತಿರುವುದರಿಂದ ಸಾಕ್ಷ್ಯ ಹಾಗೂ ಫೋರೆನ್ಸಿಕ್ ಆಧಾರಗಳನ್ನು ಕಲೆಹಾಕುವುದು ಎಸ್‌ಐಟಿ ತಂಡಕ್ಕೆ ಸವಾಲಾಗಿದೆ.

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular