ಕಲಬುರಗಿ: ಆಳಂದ ಕ್ಷೇತ್ರದಲ್ಲಿ ಮತಗಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್ ಐಟಿ ಅಧಿಕಾರಿಗಳು ದಾಳಿ ನಡೆಸುತ್ತಿದ್ದಂತೆ ದಾಖಲೆಗಳ ಬಂಡಲ್ ಗಳನ್ನು ಗೂಡ್ಸ್ ನಲ್ಲಿ ತೆಗೆದುಕೊಂಡು ಹೋಗಿ ಬೆಂಕಿ ಹಚ್ಚಿ ನದಿಗೆ ಎಸೆದಿದ್ದ ಚಾಲಕ ಪರಾರಿಯಾಗಿದ್ದಾನೆ.
ಮತಗಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಮಾಜಿ ಶಾಸಕ ಸುಭಾಷ್ ಗುತ್ತೇದಾರ್ ಅವರ ಕಲಬುರಗಿ ನಿವಾಸದ ಮೇಲೆ ಎಸ್ ಐಟಿ ಅಧಿಕಾರಿಗಳು ದಾಳಿ ನಡೆಸಿ ಪರಿಶೀಲನೆ ನಡೆಸಿದ್ದಾರೆ. ದಾಳಿ ನಡೆಸುತ್ತಿದ್ದಂತೆ ದಾಖಲೆಗಳ ಬಂಡಲ್ ಗಳನ್ನು ಗೂಡ್ಸ್ ವಾಹನದಲ್ಲಿ ತೆಗೆದುಕೊಂಡು ಹೋಗಿ ಅಮರ್ಜಾ ನದಿ ತೀರದಲ್ಲಿ ಬೆಂಕಿ ಹಚ್ಚಿ ನದಿಗೆ ಎಸೆದಿರುವ ಘಟನೆ ಬೆಳಕಿಗೆ ಬಂದಿದ್ದು, ಈ ಪ್ರಕರಣವನ್ನು ಎಸ್ ಐಟಿ ಗಂಭೀರವಾಗಿ ಪರಿಗಣಿಸಿದೆ.
ನದಿ ದಡದಲ್ಲಿ ಹಲವು ದಾಖಲೆಗಳನ್ನು ಸಂಗ್ರಹಿಸಿರುವ ಎಸ್ ಐಟಿ ಅಧಿಕಾರಿಗಳು ಪರಿಶೀಲನೆ ನಡೆಸಿದ್ದಾರೆ. ಈ ನಡುವೆ ದಾಖಲೆಗಳನ್ನು ಸುಟ್ಟಿರುವ ಗೂಡ್ಸ್ ವಾಹನ ಚಾಲಕ ಪರಾರಿಯಾಗಿದ್ದಾನೆ. ಗೂಡ್ಸ್ ವಾಹನವನ್ನು ವಶಕ್ಕೆ ಪಡೆದಿರುವ ಅಧಿಕಾರಿಗಳು, ವಾಹನ ಮಾಲೀಕನನ್ನು ವಿಚಾರಣೆ ನಡೆಸಿದ್ದಾರೆ.