HomeKarnatakaವಿಮೆ ವಂಚನೆ ಪ್ರಕರಣಗಳ ತನಿಖೆಗೆ ವಿಶೇಷ ತನಿಖಾ ತಂಡ ರಚನೆ: ಸರ್ಕಾರ ಆದೇಶ

ವಿಮೆ ವಂಚನೆ ಪ್ರಕರಣಗಳ ತನಿಖೆಗೆ ವಿಶೇಷ ತನಿಖಾ ತಂಡ ರಚನೆ: ಸರ್ಕಾರ ಆದೇಶ

ಬೆಂಗಳೂರು: ವಿಮಾ ಕಂಪನಿಗಳಿಗೆ ಸಲ್ಲಿಕೆಯಾಗುವ ವಂಚನೆಪೂರಿತ ಕ್ಲೇಮ್‌ ಗಳ ಕುರಿತು ದೂರುಗಳನ್ನು ದಾಖಲಿಸಿಕೊಂಡು ತ್ವರಿತ ತನಿಖೆ ನಡೆಸಲು ರಾಜ್ಯ ಮಟ್ಟದಲ್ಲಿ ವಿಶೇಷ ತನಿಖಾ ತಂಡ(ಎಸ್‌ಐಟಿ) ರಚಿಸಿ ಸರ್ಕಾರ ಆದೇಶ ಹೊರಡಿಸಿದೆ.

ವಿಮೆ ಕಂಪನಿಗಳ ವಿರುದ್ಧದ ವಂಚನೆಪೂರಿತ ಕ್ಲೇಮ್‌ಗಳಿಗೆ ಸಂಬಂಧಿಸಿದಂತೆ ದೇಶದಾದ್ಯಂತ ರಾಜ್ಯ ಮಟ್ಟದಲ್ಲಿ ವಿಶೇಷ ತನಿಖಾ ತಂಡಗಳನ್ನು ರಚಿಸುವಂತೆ ಸುಪ್ರೀಂ ಕೋರ್ಟ್ ನಿರ್ದೇಶನ ನೀಡಿರುವ ಹಿನ್ನೆಲೆಯಲ್ಲಿ ಎಸ್‌ಐಟಿ ರಚಿಸಲಾಗಿದೆ ಎಂದು ಗೃಹ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ.

ಎಸ್‌ಐಟಿ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕರು(ಕಾನೂನು ಮತ್ತು ಸುವ್ಯವಸ್ಥೆ), ಪೊಲೀಸ್ ಪ್ರಧಾನ ಕಚೇರಿ, ಬೆಂಗಳೂರು ಅವರ ಮೇಲ್ವಿಚಾರಣೆಯಲ್ಲಿ ಕಾರ್ಯನಿರ್ವಹಿಸಲಿದೆ. ವಿಮಾ ಕಂಪನಿಗಳಿಂದ ಸ್ವೀಕರಿಸುವ ವಂಚನೆಪೂರಿತ ಕ್ಲೇಮ್‌ ಗಳಿಗೆ ಸಂಬಂಧಿಸಿದ ಎಲ್ಲ ದೂರುಗಳನ್ನು ಪೊಲೀಸ್ ಮಹಾನಿರ್ದೇಶಕರು ಮತ್ತು ಪೊಲೀಸ್ ಮಹಾನಿರೀಕ್ಷಕರು ಎಸ್‌ಐಟಿಗೆ ವರ್ಗಾಯಿಸಲಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ವಿಮೆ ಕಂಪನಿಗಳಿಂದ ಸ್ವೀಕರಿಸುವ ಎಲ್ಲ ವಂಚನೆ ದೂರುಗಳನ್ನು ಎಸ್‌ಐಟಿ ಸಮಗ್ರವಾಗಿ ತನಿಖೆ ನಡೆಸಿ, ತನಿಖಾ ವರದಿಗಳನ್ನು ಯಾವುದೇ ವಿಳಂಬವಿಲ್ಲದೆ ಪೊಲೀಸ್ ಮಹಾನಿರ್ದೇಶಕರು ಮತ್ತು ಪೊಲೀಸ್ ಮಹಾನಿರೀಕ್ಷಕರ ಮೂಲಕ ಸರ್ಕಾರಕ್ಕೆ ಸಲ್ಲಿಸಬೇಕು. ತನಿಖೆಯ ಪ್ರಗತಿಯನ್ನು ಸಹ ನಿಯಮಿತವಾಗಿ ವರದಿ ಮಾಡಬೇಕು ಎಂದು ಆದೇಶದಲ್ಲಿ ತಿಳಿಸಲಾಗಿದೆ.

ಅಕ್ರಮ ವಲಸಿಗರ ವಿರುದ್ಧ ಮುಂದುವರೆದ ಕಾರ್ಯಾಚರಣೆ

ಅಕ್ರಮ ವಲಸಿಗರ ವಿರುದ್ಧ ಕರ್ನಾಟಕ ಪೊಲೀಸ್ ಹಾಗೂ ಗೃಹ ಇಲಾಖೆಯ ವಿಶೇಷ ಕಾರ್ಯಾಚರಣೆ ಮುಂದುವರಿದಿದೆ. ಬೆಂಗಳೂರಿನ ವಿವಿಧ ವಿಭಾಗಗಳು ಹಾಗೂ ಜಿಲ್ಲೆಗಳಲ್ಲಿ ವಶಕ್ಕೆ ಪಡೆಯಲಾಗಿದ್ದ 160 ಅಕ್ರಮ ಬಾಂಗ್ಲಾದೇಶಿ ವಲಸಿಗರನ್ನು ಗಡಿಪಾರು ಮಾಡಲಾಗಿದೆ. ಈ ಕಾರ್ಯಾಚರಣೆಯನ್ನು ಪೊಲೀಸ್ ಹಾಗೂ ವಿದೇಶಿಗರ ನೋಂದಣಿ ಅಧಿಕಾರಿಗಳ ಸಮನ್ವಯದಲ್ಲಿ ನಡೆಸಲಾಗಿದೆ.

 ವೈಟ್‌ಫೀಲ್ಡ್ – 109

 ಎಲೆಕ್ಟ್ರಾನಿಕ್ ಸಿಟಿ – 36

 ಬೆಂಗಳೂರು ಪೂರ್ವ ವಿಭಾಗ – 5

 ಬೆಂಗಳೂರು ಈಶಾನ್ಯ ವಿಭಾಗ – 3

 ಗದಗ – 2

 ಚಿಕ್ಕಮಗಳೂರು – 5

ಕರ್ನಾಟಕದ ಭದ್ರತೆ ಮತ್ತು ಸುರಕ್ಷತೆಗೆ ಮಾರಕವಾಗುವ ಚಟುವಟಿಕೆಗಳನ್ನು ಗೃಹ ಇಲಾಖೆ ಯಾವುದೇ ಕಾರಣಕ್ಕೂ ಸಹಿಸುವುದಿಲ್ಲ. ಅಕ್ರಮ ವಲಸೆಯನ್ನು ನಿಯಂತ್ರಿಸುವುದು, ಕಾನೂನು ಸುವ್ಯವಸ್ಥೆಯನ್ನು ಕಾಪಾಡುವುದು ಮತ್ತು ರಾಜ್ಯದ ಭದ್ರತೆಯನ್ನು ಮತ್ತಷ್ಟು ಬಲಪಡಿಸುವ ನಿಟ್ಟಿನಲ್ಲಿ ಗೃಹ ಇಲಾಖೆ ನಿರಂತರವಾಗಿ ಕಾರ್ಯನಿರ್ವಹಿಸುತ್ತಿದೆ.

ಕಾನೂನುಬಾಹಿರವಾಗಿ ರಾಜ್ಯದಲ್ಲಿ ನೆಲೆಸಿರುವ ವಿದೇಶಿ ಪ್ರಜೆಗಳ ವಿರುದ್ಧ ಕಾನೂನುಬದ್ಧ ಕ್ರಮಗಳನ್ನು ಮುಂದುವರಿಸಲಾಗುವುದು. ಕರ್ನಾಟಕದ ಭದ್ರತೆಯಲ್ಲಿ ಯಾವುದೇ ರಾಜಿ ಇಲ್ಲ. ರಾಜ್ಯದ ಭದ್ರತೆ ಮತ್ತು ಕಾನೂನು ಸುವ್ಯವಸ್ಥೆ ನಮ್ಮ ಮೊದಲ ಆದ್ಯತೆಯಾಗಿದೆ ಎಂದು ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ.

ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದಿಂದ ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ

ದಾವಣಗೆರೆ: ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದ ವತಿಯಿಂದ 2026-27ನೇ ಸಾಲಿಗೆ ಉದ್ಯೋಗಿನಿ, ಚೇತನಾ, ಧನಶ್ರೀ, ಲಿಂಗತ್ವ ಅಲ್ಪ ಸಂಖ್ಯಾಂತರ ಪುನರ್ವಸತಿ ಯೋಜನೆ ಹಾಗೂ ಮಾಜಿ ದೇವದಾಸಿ ಪುನರ್ವಸತಿ ಯೋಜನೆಗಳ ಅಡಿಯಲ್ಲಿ ಸೌಲಭ್ಯ ಪಡೆಯಲು ಅರ್ಹ ಮಹಿಳೆಯರು ಹಾಗೂ ಲಿಂಗತ್ವ ಅಲ್ಪಸಂಖ್ಯಾತರಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಅರ್ಹ ಅಭ್ಯರ್ಥಿಗಳು ಅಕ್ಟೋಬರ್ 31 ರೊಳಗೆ, ವೆಬ್ ಸೈಟ್ sevasindhu.karnataka.gov.in ಮೂಲಕ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು.

ವಿಶೇಷ ಸೂಚನೆ :

ಅರ್ಜಿದಾರರ ಬ್ಯಾಂಕ್ ಖಾತೆಗೆ ಆಧಾರ್ ಸೀಡಿಂಗ್ ಕಡ್ಡಾಯವಾಗಿರುತ್ತದೆ ಹಾಗೂ ಈ ಹಿಂದೆ ಯೋಜನೆಗಳ ಲಾಭ ಪಡೆದವರು ಮತ್ತೆ ಅರ್ಜಿ ಸಲ್ಲಿಸುವಂತಿಲ್ಲ. ಹಾಗೆಯೇ, ಹಿಂದಿನ ಸಾಲುಗಳಲ್ಲಿ ಅರ್ಜಿ ಸಲ್ಲಿಸಿ ಸೌಲಭ್ಯ ಸಿಗದಿದ್ದವರು ಮತ್ತೊಮ್ಮೆ ಅರ್ಜಿ ಸಲ್ಲಿಸುವ ಅಗತ್ಯವಿರುವುದಿಲ್ಲ. 

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

Most Popular