BREAKING: ಸಿಪಿಐ(ಎಂ) ನಾಯಕ ಸೀತಾರಾಂ ಯೆಚೂರಿ ಆರೋಗ್ಯ ಸ್ಥಿತಿ ಗಂಭೀರ, ವೆಂಟಿಲೇಟರ್ ನಲ್ಲಿ ಚಿಕಿತ್ಸೆ

ನವದೆಹಲಿ: ಸಿಪಿಐ(ಎಂ) ಪ್ರಧಾನ ಕಾರ್ಯದರ್ಶಿ ಸೀತಾರಾಮ್ ಯೆಚೂರಿ ಅವರನ್ನು ಆಲ್ ಇಂಡಿಯಾ ಇನ್‌ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸಸ್(ಏಮ್ಸ್) ಆಸ್ಪತ್ರೆಯ ವೆಂಟಿಲೇಟರ್‌ಗೆ ಸ್ಥಳಾಂತರಿಸಲಾಗಿದೆ ಎಂದು ಮೂಲಗಳು ಗುರುವಾರ ರಾತ್ರಿ ತಿಳಿಸಿವೆ.

ಯೆಚೂರಿ ಅವರ ಆರೋಗ್ಯ ಹದಗೆಟ್ಟ ಬೆನ್ನಲ್ಲೇ ವೆಂಟಿಲೇಟರ್‌ಗೆ ದಾಖಲಿಸಲಾಗಿತ್ತು. ಶ್ವಾಸಕೋಶದ ಸೋಂಕಿನ ಚಿಕಿತ್ಸೆಗಾಗಿ ದಾಖಲಾಗಿದ್ದ ಅವರಿಗೆ ಏಮ್ಸ್‌ ನಲ್ಲಿ ಚಿಕಿತ್ಸೆ ಮುಂದುವರಿಸಲಾಗಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.

ಯೆಚೂರಿ(72) ಅವರನ್ನು ಆಗಸ್ಟ್ 19 ರಂದು ಏಮ್ಸ್‌ ನ ತುರ್ತು ವಿಭಾಗಕ್ಕೆ ದಾಖಲಿಸಲಾಯಿತು. ನಂತರ ಅವರನ್ನು ತೀವ್ರ ನಿಗಾ ಘಟಕಕ್ಕೆ(ಐಸಿಯು) ಸ್ಥಳಾಂತರಿಸಲಾಯಿತು, ಅಲ್ಲಿ ಅವರು ಚಿಕಿತ್ಸೆಯಲ್ಲಿದ್ದಾರೆ. ವೈದ್ಯರ ತಂಡವು ಅವರ ಸ್ಥಿತಿಯನ್ನು ಮೇಲ್ವಿಚಾರಣೆ ಮಾಡುತ್ತಿದೆ ಎಂದು ಮೂಲಗಳು ತಿಳಿಸಿವೆ.

ನ್ಯುಮೋನಿಯಾ ತರಹದ ಸೋಂಕಿನ ಚಿಕಿತ್ಸೆಗಾಗಿ ಯೆಚೂರಿ ಅವರನ್ನು ಏಮ್ಸ್‌ಗೆ ದಾಖಲಿಸಲಾಗಿತ್ತು. ಆದರೆ, ಅವರ ಖಾಯಿಲೆಯ ನಿಖರ ಸ್ವರೂಪವನ್ನು ಆಸ್ಪತ್ರೆಯು ಬಹಿರಂಗಪಡಿಸಿಲ್ಲ. ಅವರು ಇತ್ತೀಚೆಗೆ ಕಣ್ಣಿನ ಪೊರೆ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದರು.

ಆಗಸ್ಟ್ 31 ರಂದು ಸಿಪಿಐ(ಎಂ) ಪಕ್ಷದ ನಾಯಕ ಯೆಚೂರಿ ಚಿಕಿತ್ಸೆಗೆ ಸಂಬಂಧಿಸಿದಂತೆ ಹೇಳಿಕೆಯನ್ನು ಬಿಡುಗಡೆ ಮಾಡಿತ್ತು. ಯೆಚೂರಿ ಅವರು ಉಸಿರಾಟದ ಸೋಂಕಿನಿಂದಾಗಿ ನವದೆಹಲಿಯ ಏಮ್ಸ್‌ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಪಕ್ಷ ತಿಳಿಸಿದೆ.

Share This Article

Latest News

ಇದೇ ಅವಧಿಯಲ್ಲಿ ಮುಖ್ಯಮಂತ್ರಿಯಾಗಲಿದ್ದಾರಾ ಡಿ.ಕೆ. ಶಿವಕುಮಾರ್‌ ?

View Results

Loading ... Loading ...

Most Read