HomeIndiaಪ್ರಧಾನಿ ಮೋದಿ ಸಂಪುಟಕ್ಕೆ ಸೇರ್ಪಡೆಯಾಗಿದ್ದಾರೆ ಆರು ಮಂದಿ ಮಾಜಿ 'ಸಿಎಂ' ಗಳು....!

ಪ್ರಧಾನಿ ಮೋದಿ ಸಂಪುಟಕ್ಕೆ ಸೇರ್ಪಡೆಯಾಗಿದ್ದಾರೆ ಆರು ಮಂದಿ ಮಾಜಿ ‘ಸಿಎಂ’ ಗಳು….!

ಭಾನುವಾರದಂದು ನರೇಂದ್ರ ಮೋದಿಯವರು ಮೂರನೇ ಬಾರಿಗೆ ಪ್ರಧಾನಿಯಾಗಿ ದೇಶದ ಚುಕ್ಕಾಣಿ ಹಿಡಿದಿದ್ದಾರೆ. ಈ ಮೂಲಕ ಜವಾಹರ್ ಲಾಲ್ ನೆಹರು ಬಳಿಕ ಮೂರು ಅವಧಿಗೆ ಪ್ರಧಾನಿಯಾದ ಹೆಗ್ಗಳಿಕೆಗೆ ನರೇಂದ್ರ ಮೋದಿಯವರು ಪಾತ್ರರಾಗಿದ್ದಾರೆ.

ಭಾನುವಾರದಂದು ಮೋದಿಯವರು ಪ್ರಮಾಣವಚನ ಸ್ವೀಕರಿಸಿದ ವೇಳೆ ಅವರೊಂದಿಗೆ 71 ಮಂದಿ ಕೇಂದ್ರ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ್ದು, ಈ ಪೈಕಿ ವಿವಿಧ ರಾಜ್ಯಗಳ ಆರು ಮಂದಿ ಮಾಜಿ ಮುಖ್ಯಮಂತ್ರಿಗಳಿರುವುದು ವಿಶೇಷ.

ಕರ್ನಾಟಕದ ಎಚ್ ಡಿ ಕುಮಾರಸ್ವಾಮಿ, ಉತ್ತರ ಪ್ರದೇಶದ ರಾಜನಾಥ್ ಸಿಂಗ್, ಹರಿಯಾಣದ ಮನೋಹರ್ ಲಾಲ್ ಖಟ್ಟರ್, ಮಧ್ಯಪ್ರದೇಶದ ಶಿವರಾಜ್ ಸಿಂಗ್ ಚೌಹಾಣ್, ಬಿಹಾರದ ಜಿತಿನ್ ಸಿಂಗ್ ಮಾಂಝಿ ಹಾಗೂ ಅಸ್ಸಾಂನ ಸರ್ಬಾನಂದ ಸೋನೆವಾಲ ನರೇಂದ್ರ ಮೋದಿ ಅವರ ಸಂಪುಟಕ್ಕೆ ಸೇರ್ಪಡೆಯಾದ ಮಾಜಿ ಮುಖ್ಯಮಂತ್ರಿಗಳಾಗಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಮತ್ತೊಂದು ವಿಶೇಷವೆಂದರೆ ಕರ್ನಾಟಕದಿಂದ ಮೂವರು ಮಾಜಿ ಮುಖ್ಯಮಂತ್ರಿಗಳು ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ವಿಜೇತರಾಗಿದ್ದು ಜಗದೀಶ್ ಶೆಟ್ಟರ್, ಬಸವರಾಜ ಬೊಮ್ಮಾಯಿ ಹಾಗೂ ಎಚ್ ಡಿ ಕುಮಾರಸ್ವಾಮಿ ಈ ಹೆಗ್ಗಳಿಕೆಗೆ ಪಾತ್ರರಾದವರಾಗಿದ್ದಾರೆ.

For Latest News Updates, Join Our Whatsapp Community🚩
RELATED ARTICLES

Most Popular