BREAKING NEWS: ನಿಯಂತ್ರಣ ತಪ್ಪಿ ಮರಕ್ಕೆ ಪ್ರವಾಸಿ ವಾಹನ ಡಿಕ್ಕಿ: ಭೀಕರ ಅಪಘಾತದಲ್ಲಿ 6 ಜನ ಸಾವು

ತಮಿಳುನಾಡಿನ ಉಲುಂದೂರುಪೇಟೆ ಬಳಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಮೆಟ್ಟತ್ತೂರು ಬಳಿ ಪ್ರವಾಸಿ ವಾಹನ ರಸ್ತೆ ಬದಿಯ ಮರಕ್ಕೆ ಡಿಕ್ಕಿ ಹೊಡೆದು ಅಪಘಾತ ಸಂಭವಿಸಿದೆ.

ಈ ಘಟನೆಯಲ್ಲಿ ಆರು ಮಂದಿ ಸಾವನ್ನಪ್ಪಿದ್ದು, 14 ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಕೂಡಲೇ ಅವರನ್ನು ವಿಲ್ಲುಪುರಂ ಮುಂಡ್ಯಂಬಾಕ್ಕಂ ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ. ಪ್ರವಾಸಿ ವಾಹನದಲ್ಲಿದ್ದವರು ತಿರುಚೆಂದೂರು ಮುರುಗನ್ ದೇವಸ್ಥಾನದಲ್ಲಿ ಸ್ವಾಮಿಯ ದರ್ಶನ ಪಡೆದು ಹಿಂದಿರುಗುತ್ತಿದ್ದಾಗ ಈ ಘಟನೆ ನಡೆದಿದೆ. ವಾಹನದ ಚಾಲಕನಿಗೆ ನಿದ್ರೆಯ ಮಂಪರಿನಲ್ಲಿದ್ದ ಕಾರಣ ಅಪಘಾತ ಸಂಭವಿಸಿರಬಹುದು ಎಂದು ಶಂಕಿಸಲಾಗಿದೆ.

ಮೃತರಲ್ಲಿ ಇಬ್ಬರು ಮಹಿಳೆಯರೂ ಸೇರಿದ್ದು, ಅವರು ಅರಣಿ ಬಳಿಯ ಮಾಂಬಕ್ಕಂನಿಂದ ತಿರುಚೆಂದೂರಿಗೆ ಹಿಂದಿರುಗುತ್ತಿದ್ದಾಗ ಅಪಘಾತ ಸಂಭವಿಸಿದೆ. ಅಪಘಾತದ ಬಗ್ಗೆ ಮಾಹಿತಿ ಪಡೆದ ಪೊಲೀಸರು ಮತ್ತು ಕಲ್ಲಕುರಿಚಿ ಜಿಲ್ಲಾ ವರಿಷ್ಠಾಧಿಕಾರಿ ರಜತ್ ಚತುರ್ವೇದಿ ಘಟನಾ ಸ್ಥಳವನ್ನು ಪರಿಶೀಲಿಸಿದರು. ಅಪಘಾತದ ಕುರಿತು ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ. ರಸ್ತೆ ಅಪಘಾತದ ನಂತರ ಭಾರೀ ಟ್ರಾಫಿಕ್ ಜಾಮ್ ಉಂಟಾಗಿದ್ದು, ಪೊಲೀಸರು ತೆರವುಗೊಳಿಸಿದರು. ಮೃತರ ವಿವರ ಹಾಗೂ ಘಟನೆಯ ಸಂಪೂರ್ಣ ವಿವರ ಇನ್ನಷ್ಟೇ ತಿಳಿದು ಬರಬೇಕಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read