ನವದೆಹಲಿ: ಛತ್ತೀಸ್‌ಗಢದ ನಾರಾಯಣಪುರ ಜಿಲ್ಲೆಯಲ್ಲಿ ನಡೆದ ಎನ್‌ಕೌಂಟರ್‌ನಲ್ಲಿ ಕನಿಷ್ಠ ಆರು ನಕ್ಸಲರನ್ನು ಭದ್ರತಾ ಪಡೆಗಳು ಹೊಡೆದುರುಳಿಸಿದ್ದಾರೆ ಎಂದು ಪೊಲೀಸರು ಶುಕ್ರವಾರ ತಿಳಿಸಿದ್ದಾರೆ.
ಅಬುಜ್ಮದ್ ಪ್ರದೇಶದ ಕಾಡಿನಲ್ಲಿ ಶುಕ್ರವಾರ ಮಧ್ಯಾಹ್ನ ಭದ್ರತಾ ಪಡೆಗಳು ಮತ್ತು ನಕ್ಸಲರ ನಡುವೆ ಎನ್‌ಕೌಂಟರ್ ನಡೆದಿದೆ. ಈ ಪ್ರದೇಶದಲ್ಲಿ ನಕ್ಸಲರ ಉಪಸ್ಥಿತಿಯ ಬಗ್ಗೆ ಮಾಹಿತಿ ಬಂದ ನಂತರ ಭದ್ರತಾ ಪಡೆಗಳು ಜಂಟಿ ಕಾರ್ಯಾಚರಣೆಯನ್ನು ಪ್ರಾರಂಭಿಸಿದ್ದವು ಎಂದು ಹಿರಿಯ ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.
ಮಧ್ಯಾಹ್ನದಿಂದ ಭದ್ರತಾ ಪಡೆಗಳು ಮತ್ತು ಮಾವೋವಾದಿಗಳ ನಡುವೆ ಅನೇಕ ಗುಂಡಿನ ಚಕಮಕಿಗಳು ನಡೆದಿವೆ. ಇಲ್ಲಿಯವರೆಗೆ, ಎನ್‌ಕೌಂಟರ್ ಸ್ಥಳದಿಂದ ಆರು ಮಾವೋವಾದಿಗಳ ಮೃತದೇಹಗಳನ್ನು ಎಕೆ -47 / ಎಸ್‌ಎಲ್‌ಆರ್ ರೈಫಲ್‌ಗಳು, ಇತರ ಶಸ್ತ್ರಾಸ್ತ್ರಗಳು, ಸ್ಫೋಟಕ ವಸ್ತುಗಳು ಮತ್ತು ದಿನನಿತ್ಯ ಬಳಸುವ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ. ಕಾರ್ಯಾಚರಣೆ ಇನ್ನೂ ಮುಂದುವರೆದಿದೆ ಎಂದು ಹೇಳಿದ್ದಾರೆ.