HomeInternationalBREAKING: ಮನೆಗೇ ನುಗ್ಗಿ ಗುಂಡಿನ ದಾಳಿ; 6 ತಿಂಗಳ ಮಗು ಸೇರಿ 6 ಜನ ಸಾವು

BREAKING: ಮನೆಗೇ ನುಗ್ಗಿ ಗುಂಡಿನ ದಾಳಿ; 6 ತಿಂಗಳ ಮಗು ಸೇರಿ 6 ಜನ ಸಾವು

ಕ್ಯಾಲಿಫೋರ್ನಿಯಾ: ಕ್ಯಾಲಿಫೋರ್ನಿಯಾದ ಮನೆಯೊಂದರಲ್ಲಿ ಬಂದೂಕುಧಾರಿಗಳು ಗುಂಡಿನ ದಾಳಿ ನಡೆಸಿದ್ದರಿಂದ ಆರು ತಿಂಗಳ ಮಗು ಮತ್ತು ತಾಯಿ ಸೇರಿದಂತೆ ಆರು ಜನರು ಸಾವನ್ನಪ್ಪಿದ್ದಾರೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

ಟ್ಯುಲೇರ್ ಕೌಂಟಿಯ ಶೆರಿಫ್ ಕಚೇರಿಯ ಶೆರಿಫ್ ಮೈಕ್ ಬೌಡ್ರೆಕ್ಸ್, ಕ್ಯಾಲಿಫೋರ್ನಿಯಾದ ಗೋಶೆನ್ ಎಂಬಲ್ಲಿ ಘಟನೆ ನಡೆದಿದ್ದು, ದಾಳಿಯಲ್ಲಿ ಆರು ತಿಂಗಳ ಮಗು, ತಾಯಿ ಸೇರಿ ಆರು ಜನ ಸಾವನ್ನಪ್ಪಿದ್ದಾರೆ. ಇಬ್ಬರು ವ್ಯಕ್ತಿಗಳು ಮನೆಯ ಮೇಲೆ ದಾಳಿ ನಡೆಸಿ, ಗುಂಡು ಹಾರಿಸಿದ್ದಾರೆ. ನೆರೆಹೊರೆಯವರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. 7 ನಿಮಿಷಗಳಲ್ಲಿ ಸ್ಥಳಕ್ಕೆ ಪೊಲೀಸರು ಧಾವಿಸಿ ಬಂದು ಪರಿಶೀಲನೆ ನಡೆಸಿದ್ದಾರೆ. 17 ವರ್ಷದ ತಾಯಿ ಮತ್ತು(ಅವಳ) ಆರು ತಿಂಗಳ ಮಗುವಿನ ತಲೆಗೆ ಗುಂಡು ಹಾರಿಸಿದ್ದಾರೆ ಎಂದು ಬೌಡ್ರೆಕ್ಸ್ ಹೇಳಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಇಬ್ಬರು ಜನರು ಕಟ್ಟಡದೊಳಗೆ ಅಡಗಿಕೊಂಡು ದಾಳಿಯಿಂದ ಬದುಕುಳಿದರು, ದಾಳಿಯು ಡ್ರಗ್ಸ್‌ ಗೆ ಸಂಬಂಧಿಸಿದಂತಿದೆ ಎಂದು ಹೇಳಲಾಗಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular