ಮನೆ ಇಲ್ಲದವರಿಗೆ ಶುಭ ಸುದ್ದಿ: ಸರ್ಕಾರದ 6ನೇ ಗ್ಯಾರಂಟಿಯಾಗಿ ಫೆಬ್ರವರಿಯಲ್ಲಿ ಮನೆ ಹಂಚಿಕೆ

ಬೆಂಗಳೂರು: ಸರ್ಕಾರದ ಆರನೇ ಗ್ಯಾರಂಟಿಯಾಗಿ ಬಡವರಿಗೆ ನಿವೇಶನ ಹಂಚಿಕೆ ಮಾಡಲಾಗುವುದು. ವಸತಿ ಯೋಜನೆಗಳಡಿ ನಿರ್ಮಾಣ ಮಾಡುತ್ತಿರುವ 2.32 ಲಕ್ಷ ಮನೆಗಳಲ್ಲಿ ಮೊದಲ ಹಂತವಾಗಿ ಫೆಬ್ರವರಿ 24 ರಂದು 36,000 ಮನೆಗಳನ್ನು ಹಂಚಿಕೆ ಮಾಡಲಾಗುವುದು ಎಂದು ವಸತಿ ಸಚಿವ ಜಮೀರ್ ಅಹ್ಮದ್ ಖಾನ್ ಹೇಳಿದ್ದಾರೆ.

ಬೆಂಗಳೂರಿನ ಶೇಷಾದ್ರಿಪುರಂನಲ್ಲಿ ಮನೆ ಬಾಗಿಲಿಗೆ ಬಂತು ಸರ್ಕಾರ ಸೇವೆಗೆ ಇರಲಿ ಸಹಕಾರ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಪ್ರಣಾಳಿಕೆಯಲ್ಲಿ ಘೋಷಣೆ ಮಾಡದಿದ್ದರೂ ಆರನೇ ಗ್ಯಾರಂಟಿಯಾಗಿ ವಸತಿ ಯೋಜನೆಗೆ ಫಲಾನುಭವಿಗಳು ಪಾವತಿಸಬೇಕಾದ ಹಣವನ್ನು ಸರ್ಕಾರದಿಂದಲೇ ಭರಿಸಲಾಗುತ್ತಿದೆ ಎಂದು ಹೇಳಿದ್ದಾರೆ.

ಸ್ಲಂ ಬೋರ್ಡ್ ಗೆ 7400 ಕೋಟಿ ರೂ., ರಾಜೀವ್ ಗಾಂಧಿ ವಸತಿ ನಿಗಮಕ್ಕೆ 1800 ಕೋಟಿ ರೂ. ನೀಡಲು ಸಂಪುಟ ಒಪ್ಪಿಗೆ ನೀಡಿದೆ. ಫೆಬ್ರವರಿ 24ರಂದು 36,000 ಮನೆಗಳ ಹಂಚಿಕೆ ಮಾಡಲಿದ್ದು, ಇನ್ನೊಂದು ವರ್ಷದಲ್ಲಿ ಎಲ್ಲಾ ಮನೆಗಳ ಹಂಚಿಕೆ ಮಾಡುವ ಗುರಿ ಹೊಂದಲಾಗಿದೆ ಎಂದು ತಿಳಿಸಿದ್ದಾರೆ.

Share This Article

Latest News

ಇದೇ ಅವಧಿಯಲ್ಲಿ ಮುಖ್ಯಮಂತ್ರಿಯಾಗಲಿದ್ದಾರಾ ಡಿ.ಕೆ. ಶಿವಕುಮಾರ್‌ ?

View Results

Loading ... Loading ...

Most Read