HomeKarnatakaBREAKING NEWS: ಚುನಾವಣೆ ಕಣದಿಂದ ದಿಢೀರ್ ನಿವೃತ್ತಿ ಘೋಷಿಸಿ ಬಿಜೆಪಿ ಸೇರಿದ ಮಾಜಿ ಶಾಸಕ ಬಸವರಾಜನ್...

BREAKING NEWS: ಚುನಾವಣೆ ಕಣದಿಂದ ದಿಢೀರ್ ನಿವೃತ್ತಿ ಘೋಷಿಸಿ ಬಿಜೆಪಿ ಸೇರಿದ ಮಾಜಿ ಶಾಸಕ ಬಸವರಾಜನ್ ದಂಪತಿ

ಬೆಂಗಳೂರು: ವಿಧಾನಸಭೆ ಚುನಾವಣೆ ಕಣದಿಂದ ನಿವೃತ್ತಿಯಾಗಿರುವ ಚಿತ್ರದುರ್ಗದ ಪಕ್ಷೇತರ ಅಭ್ಯರ್ಥಿ ಸೌಭಾಗ್ಯ ಬಸವರಾಜನ್ ಅವರು ಬಿಜೆಪಿ ಸೇರ್ಪಡೆಯಾಗಿದ್ದಾರೆ.

ಚಿತ್ರದುರ್ಗ ನಗರದ ಕಮ್ಮರೆಡ್ಡಿ ಸಮುದಾಯ ಭವನದಲ್ಲಿ ನಡೆದ ಬಿಜೆಪಿ ಪ್ರಚಾರ ಸಭೆಯಲ್ಲಿ ಭಾಗವಹಿಸಿದ್ದ ಅವರು ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಮಾಜಿ ಶಾಸಕ ಎಸ್.ಕೆ. ಬಸವರಾಜನ್ ಅವರಿಗೆ ಕಾಂಗ್ರೆಸ್ ಟಿಕೆಟ್ ಕೈತಪ್ಪಿದ ಹಿನ್ನಲೆಯಲ್ಲಿ ಪತ್ನಿ ಸೌಭಾಗ್ಯ ಅವರನ್ನು ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಸಿದ್ದರು. ಈಗ ಅವರು ಕಣದಿಂದ ನಿವೃತ್ತಿ ಘೋಷಿಸಿ ರಾಜ್ಯ ಬಿಜೆಪಿ ಉಪಾಧ್ಯಕ್ಷ ಬಿ.ವೈ. ವಿಜಯೇಂದ್ರ ಸಮ್ಮುಖದಲ್ಲಿ ಬಿಜೆಪಿಗೆ ಸೇರಿದ್ದಾರೆ. ಮಾಜಿ ಶಾಸಕ ಬಸವರಾಜನ್ ಮತ್ತು ಅವರ ಪತ್ನಿ ಸೌಭಾಗ್ಯ ಬಸವರಾಜನ್ ಅವರು ಬಿಜೆಪಿಗೆ ಸೇರ್ಪಡೆಯಾಗಿದ್ದು, ಬಿಜೆಪಿಗೆ ಬಲ ಬಂದಂತಾಗಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular