ಮುರುಘಾ ಶರಣರನ್ನು ಕೆಳಗಿಳಿಸಿದ್ದ ವಿಶ್ವಸ್ಥ ಸಮಿತಿಗೆ ಎಸ್.ಕೆ. ಬಸವರಾಜನ್ ಕಾರ್ಯದರ್ಶಿ

ಚಿತ್ರದುರ್ಗ ಜಿಲ್ಲೆ ಹೊಳಲ್ಕೆರೆ ತಾಲ್ಲೂಕು, ಮಲ್ಲಾಡಿಹಳ್ಳಿ ಅನಾಥ ಶ್ರೇವಾಶ್ರಮದ ವಿಶ್ವಸ್ಥ ಸಮಿತಿ ಕಾರ್ಯದರ್ಶಿಯಾಗಿ ಚಿತ್ರದುರ್ಗದ ಮಾಜಿ ಶಾಸಕ ಮತ್ತು ಮುರುಘಾ ಮಠದ ಮಾಜಿ ಆಡಳಿತಾಧಿಕಾರಿ ಎಸ್.ಕೆ. ಬಸವರಾಜನ್ ಅವರನ್ನು ಆಯ್ಕೆ ಮಾಡಲಾಗಿದೆ.

ಮಲ್ಲಾಡಿಹಳ್ಳಿ ಅನಾಥ ಸೇವಾಶ್ರಮದ ಆಯುರ್ವೇದ ಮೆಡಿಕಲ್ ಕಾಲೇಜಿನಲ್ಲಿ ಸೋಮವಾರ ನಡೆದ ಟ್ರಸ್ಟಿಗಳ ಸಭೆಯಲ್ಲಿ ಕಾರ್ಯದರ್ಶಿಯಾಗಿ ಎಸ್.ಕೆ. ಬಸವರಾಜನ್, ಖಜಾಂಚಿಯಾಗಿ ಡಾ.ಜಿ.ಎನ್. ಮಲ್ಲಿಕಾರ್ಜುನಪ್ಪ ಅವರನ್ನು ಆಯ್ಕೆ ಮಾಡಲಾಗಿದೆ.

ಚಿತ್ರದುರ್ಗ ಮುರುಘಾ ಮಠದ ಮುರುಘಾ ಶರಣರ ವಿರುದ್ಧ ಪೋಕ್ಸೋ ಪ್ರಕರಣ ದಾಖಲಾದ ನಂತರ ಅನಾಥ ಸೇವಾಶ್ರಮದ ವಿಶ್ವಸ್ಥ ಸಮಿತಿ ಅಧ್ಯಕ್ಷ ಸ್ಥಾನದಿಂದ ಅವರನ್ನು ಕೆಳಗಿಳಿಸಲಾಗಿತ್ತು. ಈಗ ಸಮಿತಿಗೆ ಬಸವರಾಜನ್ ಅವರನ್ನು ಕಾರ್ಯದರ್ಶಿಯಾಗಿ ಆಯ್ಕೆ ಮಾಡಲಾಗಿದೆ. ಆಶ್ರಮದ ಬ್ಯಾಂಕ್ ವ್ಯವಹಾರ, ಕಾರ್ಯಗಳು, ಹಣಕಾಸು ವ್ಯವಹಾರಗಳ ನಿರ್ವಹಣೆಗೆ ಅನುಮೋದನೆ ನೀಡಲಾಗಿದೆ.

Share This Article

Latest News

ಇದೇ ಅವಧಿಯಲ್ಲಿ ಮುಖ್ಯಮಂತ್ರಿಯಾಗಲಿದ್ದಾರಾ ಡಿ.ಕೆ. ಶಿವಕುಮಾರ್‌ ?

View Results

Loading ... Loading ...

Most Read