ಬಿಡುಗಡೆ ಆಯ್ತು ‘ಸ್ಕಂದ’ ಸಿನಿಮಾ

ಬೋಯಾಪತಿ ಶ್ರೀನು ನಿರ್ದೇಶನದ ರಾಮ್ ಪೋತಿನೇನಿ ಅಭಿನಯದ ಬಹುನಿರೀಕ್ಷಿತ ‘ಸ್ಕಂದ’ ಸಿನಿಮಾ ಇಂದು ವಿಶ್ವದ್ಯಂತ ತೆರೆಕಂಡಿದ್ದು, ಸಿನಿ ಪ್ರೇಕ್ಷಕರಿಂದ ಭರ್ಜರಿ ರೆಸ್ಪಾನ್ಸ್ ಸಿಕ್ಕಿದೆ.

ಈ ಚಿತ್ರದಲ್ಲಿ ರಾಮ್ ಪೋತಿನೇನಿ ಹಾಗೂ ಸ್ಯಾಂಡಲ್ವುಡ್‌ ನ ಶ್ರೀಲೀಲಾ ಪ್ರಮುಖ ಪಾತ್ರದಲ್ಲಿದ್ದು,  ಶ್ರೀನಿವಾಸ್ ಸ್ಕ್ರೀನ್ ಹಾಗೂ ಜಿ ಸ್ಟುಡಿಯೋಸ್ ಬ್ಯಾನರ್ ನಡಿ ಶ್ರೀನಿವಾಸ ಚಿತ್ತೂರಿ ಮತ್ತು ಪವನ್ ಕುಮಾರ್ ನಿರ್ಮಾಣ ಮಾಡಿದ್ದಾರೆ.

ಖ್ಯಾತ ಸಂಗೀತ ನಿರ್ದೇಶಕ ಎಸ್ ತಮನ್ ಸಂಗೀತ ಸಂಯೋಜನೆ ನೀಡಿರುವ ಈ ಚಿತ್ರದಲ್ಲಿ ರಾಮ್ ಪೋತಿನೇನಿ ಹಾಗೂ ಶ್ರೀಲೀಲಾ ಸೇರಿದಂತೆ ಶರತ್ ಲೋಹಿತಾಶ್ವ, ಗೌತಮಿ, ಸಾಯಿ ಮಂಜ್ರೇಕರ್, ದಗ್ಗುಬಾಟಿ ರಾಜಾ, ಇಂದ್ರಜಾ, ಪ್ರಭಾಕರ್ ತೆರೆ ಹಂಚಿಕೊಂಡಿದ್ದಾರೆ. ಆಕ್ಷನ್ ಡ್ರಾಮಾ ಕಥಾ ಹಂದರ ಹೊಂದಿರುವ ಈ ಸಿನಿಮಾ ತೆಲುಗು ಸೇರಿದಂತೆ ಐದು ಭಾಷೆಗಳಲ್ಲಿ ರಿಲೀಸ್ ಆಗಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read