HomeEntertainmentಸೆಪ್ಟೆಂಬರ್ 28 ರಂದು ರಿಲೀಸ್ ಆಗಲಿದೆ 'ಸ್ಕಂದ' ಸಿನಿಮಾ

ಸೆಪ್ಟೆಂಬರ್ 28 ರಂದು ರಿಲೀಸ್ ಆಗಲಿದೆ ‘ಸ್ಕಂದ’ ಸಿನಿಮಾ

ರಾಮ್ ಪೋತಿನೇನಿ ಅಭಿನಯದ ‘ಸ್ಕಂದ’ ಚಿತ್ರವನ್ನು  ಸೆಪ್ಟೆಂಬರ್ 15ರಂದು ಬಿಡುಗಡೆ ಮಾಡುವುದಾಗಿ ಇತ್ತೀಚಿಗೆ ಸಾಮಾಜಿಕ ಜಾಲತಾಣದಲ್ಲಿ ತಿಳಿಸಿದ್ದರು. ಇದೀಗ ಚಿತ್ರ ತಂಡ ಬಿಡುಗಡೆ ದಿನಾಂಕವನ್ನು ಬದಲಾವಣೆ ಮಾಡಿದೆ.

ಸೆಪ್ಟೆಂಬರ್ 28ರಂದು ಈ ಸಿನಿಮಾ ತೆಲುಗು ಸೇರಿದಂತೆ ಕನ್ನಡ, ತಮಿಳು, ಮಲಯಾಳಂ ಹಾಗೂ ಹಿಂದಿ  ಭಾಷೆಯಲ್ಲಿ ತೆರೆ ಕಾಣಲಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಬೋಯಾಪತಿ ಶ್ರೀನು ನಿರ್ದೇಶನದ ಈ ಚಿತ್ರದಲ್ಲಿ ರಾಮ್ ಪೋತಿನೇನಿ ಮತ್ತು ಸ್ಯಾಂಡಲ್ವುಡ್ ನ ಶ್ರೀಲೀಲಾ ಪ್ರಮುಖ ಪಾತ್ರದಲ್ಲಿದ್ದು, ಸಾಯಿ ಮಂಜ್ರೇಕರ್, ಶರತ್ ಲೋಹಿತಾಶ್ವ, ದಗ್ಗುಬಾಟಿ ರಾಜಾ, ಶ್ರೀಕಾಂತ್, ಗೌತಮಿ, ಇಂದ್ರಜಾ ಸೇರಿದಂತೆ ಮೊದಲಾದ ಕಲಾವಿದರು ತೆರೆ ಹಂಚಿಕೊಂಡಿದ್ದಾರೆ. ಶ್ರೀನಿವಾಸ ಸಿಲ್ವರ್ ಸ್ಕ್ರೀನ್ ಬ್ಯಾನರ್ ನಡಿ ಶ್ರೀನಿವಾಸ ಚಿತ್ತೂರಿ ನಿರ್ಮಾಣ ಮಾಡಿದ್ದಾರೆ.

For Latest News Updates, Join Our Whatsapp Community🚩
RELATED ARTICLES

Most Popular