BREAKING : ಧರ್ಮಸ್ಥಳದಲ್ಲಿ ‘ಅಸ್ಥಿಪಂಜರ’ ಪತ್ತೆ ವಿಚಾರ : SIT ಮುಖ್ಯಸ್ಥ ‘ಪ್ರಣಬ್ ಮೊಹಂತಿ’ ಫಸ್ಟ್ ರಿಯಾಕ್ಷನ್.!

ಬೆಂಗಳೂರು : ಧರ್ಮಸ್ಥಳ ಕೇಸ್ ಕುರಿತು ಎಸ್ ಐ ಟಿ ತನಿಖೆ ನಡೆಸುತ್ತಿದೆ. ಇಂದು ಎಸ್ ಐ ಟಿ ಮುಖ್ಯಸ್ಥ ಪ್ರಣಬ್ ಮೊಹಂತಿ ಗೃಹ ಸಚಿವ ಪರಮೇಶ್ವರ್ ಅವರನ್ನ ಭೇಟಿ ಮಾಡಿದ್ದಾರೆ. ನಂತರ ನಡೆದ ಸಭೆಯಲ್ಲಿ ಭಾಗಿಯಾದ ಪ್ರಣಬ್ ಕೊಠಡಿಯಿಂದ ಹೊರ ಬಂದರು.

ಈ ವೇಳೆ ಮಾಧ್ಯಮಗಳು ಅಸ್ಥಿಪಂಜರ ಸಿಕ್ಕ ಬಗ್ಗೆ ಪ್ರಶ್ನೆಗಳನ್ನು ಕೇಳಿದರು. ಈ ಕುರಿತಾದ ಪ್ರಶ್ನೆಗೆ ಅವರು ಯಾವುದೇ ಉತ್ತರ ನೀಡದೇ ಮುಂದೆ ಸಾಗಿದರು. ಮಾಧ್ಯಮಗಳು ಅವರನ್ನು ಹಿಂಬಾಲಿಸಿದಾಗ ಮೊಹಂತಿ ದಾರಿ ಬಿಡಿ ಎಂದಷ್ಟೇ ಹೇಳಿ ಮುಂದಕ್ಕೆ ಹೋದರು. ಈ ಬಗ್ಗೆ ಯಾವುದೇ ಪ್ರತಿಕ್ರಿಯೆ ನೀಡಲಿಲ್ಲ.

ಗೃಹ ಸಚಿವ ಪರಮೇಶ್ವರ್ ಹೇಳಿದ್ದೇನು..?

ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಳ್ಳುಸುದ್ದಿ, ಊಹಾಪೋಹಗಳನ್ನು ಹರಡುವವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಗೃಹ ಸಚಿವ ಪರಮೇಶ್ವರ್ ಎಚ್ಚರಿಕೆ ನೀಡಿದ್ದಾರೆ.ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಗೃಹ ಸಚಿವರು, ಪ್ರಚೋದನಕಾರಿ ವಿಷಯಗಳನ್ನು ಪೋಸ್ಟ್ ಮಾಡುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು. ಧರ್ಮಸ್ಥಳ ಪ್ರಕರಣದ ಬಗ್ಗೆ ಇಲ್ಲಸಲ್ಲದ ಪೋಸ್ಟ್ ಗಳನ್ನು ಹಾಕಿದವರ ವಿರುದ್ಧ ಕ್ರಮ ಜರುಗಿಸುತ್ತೇವೆ ಎಂದರು.ಧರ್ಮಸ್ಥಳ ಪ್ರಕರಣದ ಬಗ್ಗೆ ತನಿಖೆ ನಡೆಯುತ್ತಿದೆ. ತನಿಖಾ ತಂಡ ವರದಿ ಸಲ್ಲಿಸುವವರೆಗೂ ನಾವು ಈ ಬಗ್ಗೆ ಯಾವುದೇ ಹೇಳಿಕೆ ನೀಡಲ್ಲ ಎಂದು ಹೇಳಿದರು.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read