HomeKarnatakaರಾಜ್ಯದ ಶಾಲಾ ಮಕ್ಕಳಿಗೆ ಸಿಹಿ ಸುದ್ದಿ: ‘ಸ್ಕಿಲ್ @ ಸ್ಕೂಲ್’ ಯೋಜನೆಯಡಿ ಪಠ್ಯದ ಜತೆಗೆ ಕೌಶಲ...

ರಾಜ್ಯದ ಶಾಲಾ ಮಕ್ಕಳಿಗೆ ಸಿಹಿ ಸುದ್ದಿ: ‘ಸ್ಕಿಲ್ @ ಸ್ಕೂಲ್’ ಯೋಜನೆಯಡಿ ಪಠ್ಯದ ಜತೆಗೆ ಕೌಶಲ ತರಗತಿ ಆರಂಭ

ಶಿವಮೊಗ್ಗ: ಮುಂದಿನ ಶೈಕ್ಷಣಿಕ ಸಾಲಿನಿಂದ ರಾಜ್ಯದಲ್ಲಿ 8 ರಿಂದ 12ನೇ ತರಗತಿವರೆಗಿನ ಎಲ್ಲಾ ಮಕ್ಕಳಿಗೆ ಪಠ್ಯದ ಜೊತೆಗೆ ಕೌಶಲ ತರಗತಿಗಳನ್ನು ಆರಂಭಿಸಲು ಉದ್ದೇಶಿಸಲಾಗಿದೆ.

ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಸಚಿವ ಎಸ್. ಮಧು ಬಂಗಾರಪ್ಪ ಅವರು ಈ ಬಗ್ಗೆ ಮಾಹಿತಿ ನೀಡಿದ್ದಾರೆ.

ಶಿವಮೊಗ್ಗದ ಸಾಹಿತ್ಯ ಗ್ರಾಮದಲ್ಲಿ ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಮಕ್ಕಳಿಗೆ ಪ್ರೌಢಶಾಲೆ ಹಂತದಲ್ಲಿಯೇ ಕೌಶಲ್ಯ ಕಲಿಸಬೇಕೆ ಹೊರತು ಪಿಯುಸಿ ಪ್ರವೇಶಿಸಿದ ಅಥವಾ ಮುಗಿದ ನಂತರವಲ್ಲ. ಹೀಗಾಗಿ ರಾಜ್ಯದಲ್ಲಿ ಸ್ಕಿಲ್ ಅಟ್ ಸ್ಕೂಲ್ ಯೋಜನೆ ಜಾರಿಗೆ ಚಿಂತನೆ ನಡೆದಿದೆ. ಇದಕ್ಕೆ ಸಂಬಂಧಿಸಿದಂತೆ ಶೀಘ್ರವೇ ವಿವರಗಳನ್ನು ಬಿಡುಗಡೆ ಮಾಡಲಾಗುವುದು ಎಂದು ಹೇಳಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular