BIG NEWS : ರಾಜ್ಯದಲ್ಲಿ ಜಾನುವಾರುಗಳಿಗೆ ‘ಚರ್ಮಗಂಟು ರೋಗ’ : ಈ ಕ್ರಮ ಕೈಗೊಳ್ಳುವಂತೆ ಸಚಿವ ಈಶ್ವರ್ ಖಂಡ್ರೆ ಸೂಚನೆ.!

ಬೀದರ್ : ರಾಜ್ಯದಲ್ಲಿ ಜಾನುವಾರುಗಳಿಗೆ ಚರ್ಮಗಂಟು ರೋಗ ಕಾಣಿಸಿಕೊಳ್ಳುತ್ತಿದ್ದು, ಈ ಕ್ರಮ ಕೈಗೊಳ್ಳುವಂತೆ ಸಚಿವ ಈಶ್ವರ್ ಖಂಡ್ರೆ ಸೂಚನೆ ನೀಡಿದ್ದಾರೆ.

ಬೀದರ ಜಿಲ್ಲೆಯ ಮಹಾರಾಷ್ಟ್ರ ಗಡಿಭಾಗಕ್ಕೆ ಹೊಂದಿಕೊಂಡಿರುವ ಕೆಲವು ಗ್ರಾಮಗಳ ಜಾನುವಾರುಗಳಲ್ಲಿ ಚರ್ಮಗಂಟು (Lumpy Disease) ಪ್ರಕರಣಗಳು ಹೆಚ್ಚಾಗಿ ಕಾಣಿಸಿಕೊಳ್ಳುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲೆಯಾದ್ಯಂತ ವಿಶೇಷ ನಿಗಾವಹಿಸಲು ಹಾಗೂ ತುರ್ತು ಕ್ರಮ ಕೈಗೊಳ್ಳುವಂತೆ ನಾನು ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ.

ಗಡಿಭಾಗದ ಗ್ರಾಮಗಳಲ್ಲಿ ಪಶುವೈದ್ಯಕೀಯ ಇಲಾಖೆಯ ಮೂಲಕ ತಕ್ಷಣವೇ ಲಸಿಕೆ ಹಾಕಿಸುವ ಕಾರ್ಯ ಕೈಗೊಳ್ಳಬೇಕು.ರೋಗದ ಲಕ್ಷಣಗಳು (ಚರ್ಮದಲ್ಲಿ ಗುಳ್ಳೆಗಳು, ಜ್ವರ, ಹಾಲು ಉತ್ಪಾದನೆ ಕಡಿಮೆಯಾಗುವುದು, ತಿನ್ನದಿರುವುದು) ಕಂಡುಬಂದ ತಕ್ಷಣ ಪಶುವೈದ್ಯರಿಗೆ ಮಾಹಿತಿ ನೀಡಬೇಕು.ಸೋಂಕಿತ ಜಾನುವಾರುಗಳನ್ನು ಬೇರ್ಪಡಿಸಿ ಇತರ ಜಾನುವಾರುಗಳಿಗೆ ತಗುಲದಂತೆ ಕಾಳಜಿ ವಹಿಸಬೇಕು.ಗಡಿಭಾಗದ ಗ್ರಾಮಗಳಲ್ಲಿ ನಿರಂತರ ನಿಗಾ ಇಡಲು ಹಾಗೂ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲು ಅಧಿಕಾರಿ–ಸಿಬ್ಬಂದಿ ತಕ್ಷಣ ಕಾರ್ಯಪ್ರವೃತ್ತರಾಗಬೇಕು.ರೈತರು ಹಾಗೂ ಪಶುಪಾಲಕರು ತಮ್ಮ ಜಾನುವಾರುಗಳಿಗೆ ಸಮಯಕ್ಕೆ ಸರಿಯಾಗಿ ಲಸಿಕೆ ಹಾಕಿಸಿಕೊಳ್ಳಬೇಕು ಎಂದು ಮನವಿ ಮಾಡಿಕೊಳ್ಳುತ್ತೇನೆ ಎಂದರು.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read