HomeLatest NewsBREAKING: ಸ್ಕೈವಾಕ್ ಕಂಬಕ್ಕೆ ಡಿಕ್ಕಿ ಹೊಡೆದ ಬೈಕ್: ಯುವಕರ ದೇಹವೇ ಛಿದ್ರ ಛಿದ್ರ: ಇಬ್ಬರು ಸ್ಥಳದಲ್ಲೇ...

BREAKING: ಸ್ಕೈವಾಕ್ ಕಂಬಕ್ಕೆ ಡಿಕ್ಕಿ ಹೊಡೆದ ಬೈಕ್: ಯುವಕರ ದೇಹವೇ ಛಿದ್ರ ಛಿದ್ರ: ಇಬ್ಬರು ಸ್ಥಳದಲ್ಲೇ ಸಾವು

ಮಂಡ್ಯ: ವೇಗವಾಗಿ ಬಂದ ಬೈಕ್ ಸ್ಕೈ ವಾಕ್ ಕಂಬಕ್ಕೆ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರರಿಬ್ಬರೂ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಮಂಡ್ಯದ ಮಹಿಳಾ ಕಾಲೇಜು ಬಳಿ ನಡೆದಿದೆ.

ಮಹಿಳಾ ಕಾಲೇಜು ಬಳಿ ಹೊಸದಾಗಿ ಸ್ಕೈವಾಕರ್ ನಿರ್ಮಾಣ ಮಾಡಲಾಗಿತ್ತು. ವೇಗವಾಗಿ ಬಂದ್ ಬೈಕ್ ಸ್ಕೈವಾಕ್ ಕಂಬಕ್ಕೆ ಅಪ್ಪಳಿಸಿದ್ದು, ಬೈಕ್ ನಲ್ಲಿದ್ದ ಇಬ್ಬರು ಯುವಕರ ದೇಹ ಛಿದ್ರ ಛಿದ್ರವಾಗಿ ಬಿದ್ದಿದೆ. ಡಿಕ್ಕಿ ರಭಸಕ್ಕೆ ಇಬ್ಬರೂ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಡ್ಯಾನಿಲ್ (20) ಹಾಗೂ ಜೋಶ್ (20) ಮೃತ ಯುವಕರು. ಮೃತರು ಮಂಡ್ಯದ ಉದಯಗಿರಿ ಹಾಗೂ ಯತ್ತಗದಹಳ್ಳಿ ನಿವಾಸಿಗಳು ಎಂದು ತಿಳಿದುಬಂದಿದೆ. ಇಬ್ಬರೂ ಬೆಂಗಳೂರಿನಿಂದ ಮಂಡ್ಯಕ್ಕೆ ಆಗಮಿಸಿದ್ದರು. ಈ ವೇಳೆ ದುರಂತ ಸಂಭವಿಸಿದೆ. ಮಂಡ್ಯ ನಗರ ಸಂಚಾರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular