HomeKarnatakaಕೊಳಗೇರಿ ಪ್ರದೇಶದ ನಿವಾಸಿಗಳಿಗೆ ಗುಡ್ ನ್ಯೂಸ್: ಮನೆಗಳ ನೋಂದಣಿ ಮಾಡಿಕೊಡಲು ಕ್ರಮ

ಕೊಳಗೇರಿ ಪ್ರದೇಶದ ನಿವಾಸಿಗಳಿಗೆ ಗುಡ್ ನ್ಯೂಸ್: ಮನೆಗಳ ನೋಂದಣಿ ಮಾಡಿಕೊಡಲು ಕ್ರಮ

ಕೊಳಗೇರಿ ಅಭಿವೃದ್ಧಿ ಮಂಡಳಿ ವತಿಯಿಂದ ಸರ್ಕಾರಿ ಹಾಗೂ ಸ್ಥಳೀಯ ಸಂಸ್ಥೆಗಳ ಮಾಲೀಕತ್ವದ ಕೊಳಗೇರಿ ಪ್ರದೇಶಗಳನ್ನು ಈಗಾಗಲೇ ಹಸ್ತಾಂತರ ಪಡೆದು ಹಕ್ಕು ಪತ್ರ ವಿತರಿಸಿರುವ ನಿವಾಸಿಗಳಿಗೆ ಮನೆಗಳಿಗೆ ನೋಂದಾಯಿಸಿಕೊಡಲಾಗುವುದು.

ನೋಂದಾಯಿಸಲು ಇ-ಖಾತೆ ಬೇಕಾಗಿರುವುದರಿಂದ ಸಂಬಂಧಪಟ್ಟ ಸ್ಥಳೀಯ ಸಂಸ್ಥೆಗಳಿಂದ ಇ-ಖಾತೆ ಪಡೆಯಲು ಮಹಾನಗರ ಪಾಲಿಕೆ ಆಯುಕ್ತರು, ನಗರಸಭೆಯ ಪೌರಾಯುಕ್ತರು, ಪುರಸಭೆ ಮುಖ್ಯಾಧಿಕಾರಿಗಳಿಗೆ ಮನವಿ ಮಾಡಲಾಗಿದೆ.

ಈಗಾಗಲೇ ಉಪ-ವಿಭಾಗದ ಅಧೀನದಲ್ಲಿ ಅಥವಾ ಅವರ ಗಮನದಲ್ಲಿ ಇಲ್ಲದೇ ಪಡೆದಿರುವ ಹಕ್ಕು ಪತ್ರಗಳನ್ನು ಮೇಲಾಧಿಕಾರಿಗಳ ಆದೇಶದಂತೆ ರದ್ದು ಮಾಡಲಾಗಿದೆ. ನಗರ ಸ್ಥಳೀಯ-ಸಂಸ್ಥೆಗಳಿಂದ ಇ-ಖಾತೆ ಪಡೆದ ನಂತರ ನೋಂದಾಯಿಸಿಕೊಡಲಾಗುವುದು. ಸಾರ್ವಜನಿಕರು ಸಹಕರಿಸಬೇಕು ಎಂದು ಬಳ್ಳಾರಿ ಕೊಳಗೇರಿ ಅಭಿವೃದ್ಧಿ ಮಂಡಳಿಯ ಸಹಾಯಕ ಕಾರ್ಯಪಾಲಕ ಅಭಿಯಂತರರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular