BREAKING : ಲೋಕಸಭೆಯಲ್ಲಿ ಹೊಗೆ ಬಾಂಬ್ ಪ್ರಕರಣ : ಬಾಗಲಕೋಟೆಯ ಟೆಕ್ಕಿ ಪೊಲೀಸ್ ವಶಕ್ಕೆ

ಬಾಗಲಕೋಟೆ : ಲೋಕಸಭೆಯಲ್ಲಿ ಹೊಗೆ ಬಾಂಬ್ ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಗಲಕೋಟೆಯ ಟೆಕ್ಕಿಯೋರ್ವನನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.

ಬಾಗಲಕೋಟೆಯ ನಿವೃತ್ತ ಡಿವೈಎಸ್ಪಿ ಅವರ ಮಗ ಸಾಯಿ ಕೃಷ್ಣನನ್ನು ದೆಹಲಿ ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಈತ ಮನೋರಂಜನ್ ಸ್ನೇಹಿತನಾಗಿದ್ದು, ಇಬ್ಬರು ಎಂಜಿನಿಯರಿಂಗ್ ಓದುವಾಗ ರೂಮ್ ಮೇಟ್ ಆಗಿದ್ದರು ಎನ್ನಲಾಗಿದೆ. ಡೈರಿಯಲ್ಲಿ ಸಾಯಿಕೃಷ್ಣ ಹೆಸರನ್ನು ಮನೋರಂಜನ್ ಉಲ್ಲೇಖಿಸಿದ್ದು, ಈ ಹಿನ್ನೆಲೆ ದೆಹಲಿ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ ಎಂದು ತಿಳಿದು ಬಂದಿದೆ.

ಡಿ.13ರಂದು ಇಬ್ಬರು ಯುವಕರು ಲೋಕಸಭೆಯ ಪ್ರೇಕ್ಷಕರ ಗ್ಯಾಲರಿಯಿಂದ ಜಿಗಿದು ಹೊಗೆ ಬಾಂಬ್ ಸಿಡಿಸಿ ಸಂಸತ್ತಿನಲ್ಲಿ ಕೋಲಾಹಲ ಸೃಷ್ಟಿಸಿದ್ದರು.ಇದನ್ನು ಕೇಂದ್ರ ಸರ್ಕಾರ ಬಹಳ ಗಂಭೀರವಾಗಿ ತೆಗೆದುಕೊಂಡಿದ್ದು, ಹಲವರನ್ನು ಬಂಧಿಸಿ ವಿಚಾರಣೆ ನಡೆಸಲಾಗುತ್ತಿದೆ.

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read