
ಬಾಗಲಕೋಟೆಯ ನಿವೃತ್ತ ಡಿವೈಎಸ್ಪಿ ಅವರ ಮಗ ಸಾಯಿ ಕೃಷ್ಣನನ್ನು ದೆಹಲಿ ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಈತ ಮನೋರಂಜನ್ ಸ್ನೇಹಿತನಾಗಿದ್ದು, ಇಬ್ಬರು ಎಂಜಿನಿಯರಿಂಗ್ ಓದುವಾಗ ರೂಮ್ ಮೇಟ್ ಆಗಿದ್ದರು ಎನ್ನಲಾಗಿದೆ. ಡೈರಿಯಲ್ಲಿ ಸಾಯಿಕೃಷ್ಣ ಹೆಸರನ್ನು ಮನೋರಂಜನ್ ಉಲ್ಲೇಖಿಸಿದ್ದು, ಈ ಹಿನ್ನೆಲೆ ದೆಹಲಿ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ ಎಂದು ತಿಳಿದು ಬಂದಿದೆ.
ಡಿ.13ರಂದು ಇಬ್ಬರು ಯುವಕರು ಲೋಕಸಭೆಯ ಪ್ರೇಕ್ಷಕರ ಗ್ಯಾಲರಿಯಿಂದ ಜಿಗಿದು ಹೊಗೆ ಬಾಂಬ್ ಸಿಡಿಸಿ ಸಂಸತ್ತಿನಲ್ಲಿ ಕೋಲಾಹಲ ಸೃಷ್ಟಿಸಿದ್ದರು.ಇದನ್ನು ಕೇಂದ್ರ ಸರ್ಕಾರ ಬಹಳ ಗಂಭೀರವಾಗಿ ತೆಗೆದುಕೊಂಡಿದ್ದು, ಹಲವರನ್ನು ಬಂಧಿಸಿ ವಿಚಾರಣೆ ನಡೆಸಲಾಗುತ್ತಿದೆ.

